Tuesday, September 22, 2020
Tuesday, September 22, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಪಶುಸಂಗೋಪನೆ ಇಲಾಖೆಯ ಮುಂಬಡ್ತಿ, ಜೇಷ್ಠತಾ ಸಮಸ್ಯೆಗೆ ಮುಕ್ತಿ ಸಿಕ್ಕಿದೆ : ಸಚಿವ ಪ್ರಭು ಚವ್ಹಾಣ್

sharing is caring...!

ಬೀದರ್ : ಪಶುಸಂಗೋಪನೆ ಇಲಾಖೆಯ 66 ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಜಿಲ್ಲಾ ಉಪನಿರ್ದೇಶಕರನ್ನಾಗಿ ನೇಮಿಸಿ ಪದೋನ್ನತಿ ಆದೇಶ ಹೊರಡಿಸಲಾಗಿದೆ. ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಶುಸಂಗೋಪನೆ ಇಲಾಖೆಯ ಜೇಷ್ಠತಾ ಪಟ್ಟಿ ಹಾಗೂ ಮುಂಬಡ್ತಿಗೆ ಸಂಬಂಧಿಸಿದ ಆದೇಶ ಹೊರಡಿಸಿರುವ ಬಗ್ಗೆ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯ ಕ್ತಪಡಿಸಿದ್ದಾರೆ.
ಈ ಬಗ್ಗೆ ಸಂತಸ ಹಂಚಿಕೊಂಡ ಸಚಿವರು, `ಪಶುಸಂಗೋಪನಾ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ಇಲಾಖಾ ಕಾರ್ಯದರ್ಶಿ, ಹಿರಿಯ ಅಧಿಕಾರಿಗಳು, ವಿವಿಧ ವೃಂದದ ಸಂಘದ ಪದಾಧಿಕಾರಿಗಳು ಪಶುಸಂಗೋಪನೆ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಶು ವೈದ್ಯಾಧಿಕಾರಿಗಳ ಜೇಷ್ಠತಾ ಪಟ್ಟಿ ಹಾಗೂ ಮುಂಬಡ್ತಿಯ ಸಮಸ್ಯೆಯನ್ನು ನನ್ನ ಗಮನಕ್ಕೆ ತಂದಿದ್ದರು. ಈ ಸಮಸ್ಯೆಯನ್ನು ಪರಿಹರಿಸಲು ಹಲವುಬಾರಿ ಪ್ರಯತ್ನ ನಡೆಸಿದ್ದೆ. ಇಲಾಖೆಯ ನೌಕರರು ಈ ವಿಷಯದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಸಂಘದ ಎಲ್ಲ ಪದಾಧಿಕಾರಿಗಳು, ಕಾರ್ಯದರ್ಶಿಯವರ ಹಾಗೂ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ನಡೆಸಿ ಜೇಷ್ಠತಾ ಪಟ್ಟಿ ಹಾಗೂ ಮುಂಬಡ್ತಿಗೆ ಇದ್ದ ಅಡೆತಡೆಗಳನ್ನು ಬಗೆಹರಿಸಿ, ಕಾನೂನಿನ ಚೌಕಟ್ಟಿನಲ್ಲಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಪ್ರಯತ್ನಿಸಿದೆ. ಇಲಾಖಾ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ತಂಡ ರಚಿಸಿ ಯಾರಿಗೂ ತೊಂದರೆ ಆಗದಂತೆ ಎಚ್ಚರವಹಿಸಿ 66 ಮುಖ್ಯ ಪಶುವೈದ್ಯಾಧಿಕಾರಿಗಳಿಗೆ ಪದೋನ್ನತಿಗೆ ಆದೇಶ ಹೊರಡಿಸಿರುವುದು ಹರ್ಷ ತಂದಿದೆ ಎಂದು ತಿಳಿಸಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪುನರ್ ರಚನೆಯನ್ನು 2012 ರಲ್ಲಿ ನಮ್ಮ ಸರ್ಕಾರ ಇದ್ದ ಅವಧಿಯಲ್ಲಿ ಮಾಡಲಾಗಿತ್ತು. ಇಲಾಖೆಯ ಸಚಿವರು, ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಜೇಷ್ಠತಾ ಪಟ್ಟಿ ಹಾಗೂ ಮುಂಬಡ್ತಿ ಕಗ್ಗಂಟಾಗಿ ಉಳಿದಿತ್ತು ಇದರಿಂದಾಗಿ ಅರ್ಹ ಪಶುವೈದ್ಯರಿಗೆ ಪದೋನ್ನತಿ ನೀಡಲು ತೊಡಕುಗಳು ಇದ್ದುದರಿಂದ ಜಿಲ್ಲಾ ಆಡಳಿತವನ್ನು ಪ್ರಭಾರಿ ಅಧಿಕಾರಿಗಳು ನಿರ್ವಹಿಸುವ ಹಂತಕ್ಕೆ ತಲುಪಿತ್ತು. ಇಲಾಖಾ ಆಡಳಿತ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಇದ್ದ ತೊಡಕುಗಳನ್ನು ನಿವಾರಿಸಿ ಪದೋನ್ನತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಇಲಾಖೆ 2012ರಲ್ಲಿ ಪುನರ್ ರಚನೆಯಾಗಿ 2017 ರಿಂದ ವೃಂದ ಮತ್ತು ನೇಮಕಾತಿ ನಿಯಮ ಅನ್ವಯವಾಗಿರುವುದರಿಂದ, ಆ ಅವಧಿಗೆ 10, 15, 20, 25 ವರ್ಷಗಳ ಸೇವೆ ಸಲ್ಲಿಸಿದ ಅರ್ಹ ಪಶುವೈದ್ಯಾಧಿಕಾರಿಗಳಿಗೆ ಕಾಲಮಿತಿ ವೇತನ ಬಡ್ತಿ ಹಾಗೂ ಇನ್ನಿತರೆ ಆರ್ಥಿಕ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಪ್ರತ್ಯೇಕವಾಗಿ ಕ್ರಮಕೈಗೊಳ್ಳಲು ಇಲಾಖಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ. 2017ರ ನಂತರ ಹೊಸ ವೃಂದ ನೇಮಕಾತಿ ಅನ್ವಯ ಕಾಲಮಿತಿ ಬಡ್ತಿ ಮತ್ತು ಆರ್ಥಿಕ ಸೌಲಭ್ಯಾಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಹಾಗೆಯೇ ತಾಲ್ಲೂಕು ಮಟ್ಟದ ಆಡಳಿತ ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಜೇಷ್ಠತಾ ಆಧಾರದ ಮೇಲೆ 345 ಮುಖ್ಯ ಪಶುವೈದ್ಯಾಧಿಕಾರಿಗಳಿಗೆ ಈಗಾಗಲೇ ಗುರುತಿಸಿರುವ ಪ್ರಮುಖ ಹುದ್ದೆಗಳಿಗೆ ಇಲಾಖಾ ಪುನರ್ ರಚೆನೆ ಅನ್ವಯ ಸ್ಥಾನಪಲ್ಲಟಗೊಳಿಸಲಾಗುವುದು ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಲಾಖೆಯಲ್ಲಿ ಏನೇ ಸಮಸ್ಯೆ ಇದ್ದರೂ ಕುಟುಂಬದ ಒಬ್ಬ ಸದಸ್ಯನಾಗಿ ಇಲಾಖೆಯ ಸಮಸ್ಯೆಯನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಸಚಿವರು ತಿಳಿಸಿದರು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!