ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಏಪ್ರಿಲ್-ಮೇನಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಪಾರ್ಟಿ ಸ್ಪರ್ಧಿಸುವುದಾಗಿ ಘೋಷಿಸಿದೆ.
ಈ ಕುರಿತು ಟ್ವೀಟ್ ಮಾಡಿ ಶಿವಸೇನೆ ವಕ್ತಾರ ಸಂಜಯ್ ರಾವತ್ , ನೀವು ಕಾಯುತ್ತಿದ್ದ ಬಹು ನಿರೀಕ್ಷಿತ ಸುದ್ದಿ ಇಲ್ಲಿದೆ. ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆಯವರೊಂದಿಗೆ ನಡೆದ ಮಾತುಕತೆಯಲ್ಲಿ ಶಿವಸೇನೆ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ನಾವು ಸದ್ಯದಲ್ಲೇ ಕೊಲ್ಕತ್ತಾಗೆ ಬರುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದ್ದು, ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ಪೈಪೋಟಿ ಎದುರಾಗಿದೆ. ಈ ಮಧ್ಯೆ ಶಿವಸೇನೆ ಹೊರಹಾಕಿರುವ ಸುದ್ದಿ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗುರಿಯಾಗುವ ಸಾಧ್ಯತೆ ಇದೆ.