Wednesday, August 10, 2022

Latest Posts

ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷರ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಲಿಪುರ್ದಾರ್ ಜಿಲ್ಲೆಯ ಜೈಗಾಂವ್‌ಗೆ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ತೆರಳುತ್ತಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಅಲ್ಲದೆ, ಕಪ್ಪು ಬಾವುಟ ತೋರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉತ್ತರ ಬಂಗಾಳದಲ್ಲಿ ಈ ಕೃತ್ಯ ನಡೆದಿದ್ದು, ಹಲವು ವಾಹನಗಳು ಹಾನಿಗೀಡಾಗಿವೆ. ಜೊತೆಗೆ ಕೆಲವರು ಗಾಯಗೊಂಡಿದ್ದಾರೆ.
ಗೋರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಕಾರ್ಯಕರ್ತರು ಘೋಷ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇಲ್ಲಿಂದ ಹಿಂದಕ್ಕೆ ಹೋಗುವಂತೆ ಒತ್ತಾಯಿಸಿದ್ದಾರೆ.  ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾಕಾರರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

ದಿಲೀಪ್ ಘೋಷ್ ಸಾರ್ವಜನಿಕ ಸಭೆಯಲ್ಲಿದ್ದರು. ಇದಕ್ಕೂ ಮೊದಲು ಘೋಷ್ ವಿರುದ್ಧ ಪ್ರತಿಭಟನೆ ನಡೆದಿತ್ತು, ಅಲ್ಲದೆ ಕಪ್ಪು ಬಾವುಟವನ್ನ ಹಾರಿಸಿ ಅವರ ಪಬ್ಲಿಕ್ ಮೀಟಿಂಗ್​ ಅನ್ನ ಕೆಲವರು ಖಂಡಿಸಿದ್ದರು ಎಂಬ ವರದಿ ಕೂಡ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss