ಪಾಂಡವಪುರ : ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ ನಡೆಸಿರುವ ಪೊಲೀಸರು ಕಂಪ್ರೆಷರ್, ಹಿಟಾಚಿ ಯಂತ್ರ ಹಾಗೂ ಅಪಾರ ಪ್ರಮಾಣದ ಸ್ಟೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಹಾಗೂ ಶ್ರೀರಂಗಪಟ್ಟಣ ಡಿವೈಎಸ್ಪಿ ಅರುಣ್ ನಾಗೇ ಗೌಡ ಅವರ ಮಾರ್ಗ ದರ್ಶನದ ಮೇರೆಗೆ ಖಚಿತ ಮಾಹಿಯನ್ನಾಧರಿಸಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ಪ್ರಭಾಕರ್ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಎರಡು ಕಡೆ ಗಳಲ್ಲಿ ಗಣಿಗಾರಿಕೆ ಪ್ರದೇಶಗಳ ಮೇಲೆ ದಾಳಿ ನಡೆಸಿದ ಪಾಂಡವಪುರ ಪೊಲೀಸರು ಅಪಾರ ಪ್ರಮಾಣದ ಸ್ಟೋಟP Àಗಳು, ಕಂಪ್ರೇಷರ್ ಹಾಗೂ ಹಿತಾಚಿ ಯಂತ್ರವನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿದ್ದಾರೆ.
ತಾಲೂಕಿನ ಹೊನಗಾನ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ 27 ಹಾಗೂ ಚಿನಕುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ 81ರ ಗಣಿಗಾರಿಕೆ ಪ್ರದೇಶದಲ್ಲಿ ಸ್ಟೋಟಕಗಳನ್ನು ಹಾಗೂ ಕಂಪ್ರೇಷರ್ ಬಳಕೆ ಮಾಡಿಕೊಂಡು ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪಾಂಡವಪುರ ಪೊಲೀಸರು ದಾಳಿ ನಡೆಸಿದ್ದರು.
ಈ ವೇಳೆ ಆರೋಪಿಗಳಾದ ರಾಗಿ ಮುದ್ದನಹಳ್ಳಿ ಗಿರೀಶ್ ಹಾಗೂ ಚಿನಕುರಳಿ ಕುಮಾರ್ ಅವರುಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಸಂಬಂಧ ಪಾಂಡವ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿ ಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.