ಪೇಶಾವರ: ಪಾಕಿಸ್ತಾನದ ಪೇಶಾವರದಲ್ಲಿ ಮಂಗಳವಾರ ಸೆಮಿನರಿ(ಉನ್ನತ ಶಿಕ್ಷಣ ಸಂಸ್ಥೆ) ಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಮಕ್ಕಳು ಸೇರಿದಂತೆ 70 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಏಳು ಮೃತ ದೇಹಗಳು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ ಕುರಿತು ಉಪನ್ಯಾಸ ನೀಡುತ್ತಿರುವಾಗ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ವಾಕರ್ ಅಜೀಮ್ ತಿಳಿಸಿದ್ದಾರೆ.