Sunday, June 26, 2022

Latest Posts

ಪಾಕಿಸ್ತಾನದ ಮಾಜಿ ಪ್ರಧಾನಿ ಜಫರುಲ್ಲಾ ಖಾನ್ ಜಮಾಲಿ ನಿಧನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಾಕಿಸ್ತಾನದ ಮಾಜಿ ಪ್ರಧಾನಿ ಜಫರುಲ್ಲಾ ಖಾನ್ ಜಮಾಲಿ (72) ಅವರು ರಾವಲ್ಪಿಂಡಿಯ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನರಾಗಿದ್ದಾರೆ.

ಹೃದಯಾಘಾತದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಸಹಾಯ ಪಡೆಯುತ್ತಿದ್ದ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.

ಮಿರ್ ಜಫರುಲ್ಲಾ ಖಾನ್ ಜಮಾಲಿ ಅವರು 2002 ರಿಂದ 2004ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss