ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಪಾಕಿಸ್ತಾನ ಸೇರಿದಂತೆ 12 ದೇಶಗಳ ಪ್ರವಾಸಿಗರ ಪ್ರವಾಸಿಗರಿಗೆ ಹೊಸ ವೀಸಾಗಳ ವಿತರಣೆಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವಿದೇಶಾಂಗ ಕಚೇರಿ ತಿಳಿಸಿದೆ.
ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದ ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರ ಜಾಹಿದ್ ಹಫೀಜ್ ಚೌಧರಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ವಿತರಣೆ ಆಗಿರುವ ವೀಸಾಗಳಿಗೆ ಈ ಅಮಾನತು ಅನ್ವಯ ಆಗುವುದಿಲ್ಲ ಎಂದು ತಿಳಿಸಲಾಗಿದೆ. ಈ ನಿರ್ಧಾರದಿಂದ ಎಷ್ಟು ಬಗೆಯ ವೀಸಾಗಳ ಮೇಲೆ ಪರಿಣಾಮ ಆಗಲಿದೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಪ್ರವಾಸಿ, ವಾಣಿಜ್ಯ, ವಿದ್ಯಾರ್ಥಿ ಸೇರಿ ವಿವಿಧ ಬಗೆಯ ವೀಸಾಗಳನ್ನು ಯುಎಇಯಿಂದ ವಿತರಣೆ ಮಾಡಲಾಗುತ್ತದೆ.
ಪಾಕಿಸ್ತಾನದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಜುಲೈ 3ರವರೆಗೆ ಪ್ರಯಾಣಿಕರ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಯುಎಇ ಜೂನ್ನಲ್ಲಿ ಘೋಷಿಸಿತ್ತು.