Thursday, August 11, 2022

Latest Posts

ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಮೂವರು ಭಾರತೀಯ ಯೋಧರು ಹುತಾತ್ಮ, ಐವರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಯೋಧರು ಗಡಿ ನಿಯಮ ಉಲ್ಲಂಘನೆ ಮಾಡಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದನಡೆಸಿದ್ದು, ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆ.
ಕುಪ್ವಾರಾದ ನೌಗಮ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯಲ್ಲಿ ಮುಂಜಾನೆ ಪಾಕಿಸ್ತಾನ ಪಡೆಗಳು ಮುನ್ನೆಲೆ ಸೇನಾ ಶಿಬಿರಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿವೆ ಎಂದು ವಕ್ತಾರರಾದ ಕರ್ನಲ್ ರಾಜೇಶ್ ಕಾಲಿಯಾ ಯುಎನ್‌ಐಗೆ ತಿಳಿಸಿದ್ದಾರೆ.ಪಾಕ್‍ ನ ಗುಂಡಿನ ದಾಳಿಗೆ ಭಾರತೀಯ ಸೇನೆ, ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರ್​ ಜಿಲ್ಲೆಯ ನಾಗಮ್​​ ಸೆಕ್ಟರ್​​ನಲ್ಲಿ ಪಾಕ್​ ಸೇನೆ ಶೆಲ್​ ದಾಳಿ ನಡೆಸಲು ಆರಂಭಿಸುತ್ತಿದ್ದಂತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಯೋಧರು ಗಾಯಗೊಂಡಿದ್ದು, ಅವರನ್ನ ಆರ್ಮಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದಕ್ಕೂ ಮೊದಲು ನಡೆದ ಪಾಕ್​ ನಡೆಸಿದ ಗುಂಡಿನ ದಾಳಿಯಲ್ಲಿ ಪೂಂಚ್​ ಸೆಕ್ಟರ್​​​ನಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಕಳೆದ ಎಂಟು ತಿಂಗಳಲ್ಲಿ ಪಾಕ್​​ 3 ಸಾವಿರಕ್ಕೂ ಅಧಿಕ ಸಲ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss