ಹೊಸದಿಗಂತ ವರದಿ, ಕೊಡಗು:
ಗ್ರಾಮ ಪಂಚಾಯತ್ ಚುನಾವಣಾ ಮತ ಎಣಿಕೆ ಸಂದರ್ಭ ಉಜಿರೆಯಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಎಸ್ ಡಿಪಿಐ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಇಂತಹ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದರು.
ಮಡಿಕೇರಿ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ನಗರ ಅಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಜಗದೀಶ್, ಕಾರ್ಯದರ್ಶಿ ಅಪ್ಪಣ್ಣ, ಜಿಲ್ಲಾ ವಕ್ತಾರ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ನಗರಸಭೆ ಮಾಜಿ ಸದಸ್ಯರಾದ ಟಿ ಎಸ್ ಪ್ರಕಾಶ್, ಉನ್ನಿಕೃಷ್ಣ,ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ರಾಕೇಶ್, ಕನ್ನಿಕೆ, ಪ್ರೇಮ, ಗೌರಮ್ಮ, ಶ್ವೇತಾ ಪ್ರಶಾಂತ್,ಜಿಲ್ಲಾ ಕಾರ್ಯದರ್ಶಿ ಅನಿತಾ ಪೂವಯ್ಯ ಹಾಗೂ ಬಿಜೆಪಿ ಯುವ ಮೋರ್ಚಾ ಪ್ರೀತಮ್,ವಿಜ್ಞೇಶ್ ಹಾಗೂ ಸಾಮಾಜಿಕ ಜಾಲತಾಣದ ಪಾಂಡೀರ ಪೂಣಚ್ಚ, ಕುಶ, ರಾಕೇಶ್,ಜೀವನ್, ಮುರುಗನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.