Tuesday, June 28, 2022

Latest Posts

ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮ: ಈಶ್ವರಪ್ಪ

 ಹೊಸದಿಗಂತ ವರದಿ, ದಾವಣಗೆರೆ:

ಪಾಕಿಸ್ಥಾನ ಚಿಂದಾಬಾದ್ ಘೋಷಣೆ ಕೂಗಿದ ಎಸ್‌ಡಿಪಿಐ ವರ್ತನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ
ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲೆಯ ಹರಿಹರ ತಾಲೂಕು ಬೆಳ್ಳೂಡಿ ಗ್ರಾಮದ ಕಾಗಿನೆಲೆ ಕನಕ ಗುರುಪೀಠದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜಿಂದಾಬಾದ್ ಹೇಳಿದ 4 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಗೆದ್ದಿಗೆ. ಕೇವಲ 3 ಗ್ರಾಪಂ ಗೆದ್ದವರಷ್ಟೇ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದಾರೆ. ಶತೃರಾಷ್ಟ್ರ ಪಾಕ್ ಪರ ಘೋಷಣೆ ಕೂಗಿದವರಿಗೆ ಕೆಲವು ರಾಜಕೀಯ ಪಕ್ಷಗಳ ಬೆಂಬಲವಿದೆ. ಅಂತಹ ಪಕ್ಷಗಳು ಇಂದು ಗಂಭೀರವಾಗಿ ಯೋಚನೆ ಮಾಡಬೇಕಾಗಿದೆ ಎಂದರು.
ಎಸ್‌ಡಿಪಿಐ ಸೊಕ್ಕು ಇನ್ನೂ ಕಡಿಮೆಯಾಗಿಲ್ಲ. ಹಿಂದಿನ ಸರ್ಕಾರಗಳು ನೀಡಿದ ಬೆಂಬಲದಿಂದಲೇ ಇಷ್ಟೆಲ್ಲಾ ಸೊಕ್ಕು ಬಂದಿದೆ. ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಎಫ್‌ಐಆರ್ ಹಾಕಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತವೆ. ಕೆಲವರ ಬೆಂಬಲದಿಂದಲೇ ಇಂತಹ ಘೋಷಣೆಗಳನ್ನು ಕೇಳುತ್ತವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಲಿದೆ. ಈಗಾಗಲೇ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಉಳಿದಂತೆ ಕಾನೂನು ತನ್ನ ಕೆಲಸ ಮಾಡಲಿದೆ. ಇಂತಹ ಘಟನೆಗಳನ್ನು ನಮ್ಮ ಸರ್ಕಾರ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸಿಎಂ ಯಡಿಯೂರಪ್ಪ ಐದು ತಿಂಗಳಿನಿಂದ ಅನಾರೋಗ್ಯದಿಂದ ಕಚೇರಿ ಕೆಲಸ ಮಾಡುತ್ತಿಲ್ಲ ಎಂಬ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದ ಕೆ.ಎಸ್.ಈಶ್ವರಪ್ಪ, ಯಾವನೋ ಕುಡಿದು ಹೇಳಿಕೆ ನೀಡಿದ್ರೆ ಅದನ್ನು ಕೇಳೋಕೆ ಆಗುತ್ತಾ? ನಮ್ಮವನೇ ಆಗಿರಲಿ, ಬೇರೆ ಯಾರೇ ಆಗಿರಲಿ ಎಂದು ತಿರುಗೇಟು ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss