Monday, August 8, 2022

Latest Posts

ಪಾಲಿಕ್ಲಿನಿಕ್‌ಗೆ ಬೇಕಾದ ಅಗತ್ಯ ಉಪಕರಣಗಳ ಪೂರೈಕೆಗೆ ಸರ್ಕಾರಕ್ಕೆ ಪತ್ರ: ನೆಹರು ಓಲೇಕಾರ

ಹೊಸ ದಿಗಂತ ವರದಿ, ಹಾವೇರಿ:

ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಈಡೇರಿದ್ದು, ಜಿಲ್ಲಾ ಕೇಂದ್ರದಲ್ಲಿ ಹೈಟೆಕ್ ಪಾಲಿಕ್ಲಿನಿಕ್ ಆಸ್ಪತ್ರೆ ಸೇವೆಗೆ ಸಜ್ಜಾಗಿದೆ. ಎಕ್ಸರೆ ಕ್ಯಾಮರಾ ಸೇರಿದಂತೆ ಶಸ್ತ್ರ ಚಿಕಿತ್ಸೆ ಬೇಕಾದ ವಿವಿಧ ಅಗತ್ಯ ಉಪಕರಣಗಳ ಪೂರೈಕೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಹೇಳಿದರು.
ನಗರದ ಪಾಲಿಕ್ಲಿನಿಕ್ ಆವರಣದಲ್ಲಿ ಬುಧವಾರ ಜರುಗಿದ ನೂತನ ಪಾಲಿಕ್ಲನಿಕ್ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜಾನುವಾರುಗಳು, ಪಶು, ಪಕ್ಷಿಗಳು ಅನಾರೋಗ್ಯದಿಂದ ಬಳಲುತ್ತಿದ್ದರೆ ರೈತರು ಪಾಲಿಕ್ಲಿನಿಕ್ ಆಸ್ಪತ್ರೆಗೆ ಕರೆತಂದು ಸೂಕ್ತ ಚಿಕಿತ್ಸೆ ಕೊಡಿಸಿ ಜಾನುವಾರು ಸಂಪತ್ತನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನೂತನ ಪಾಲಿಕ್ಲಿನಿಕ್ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಇದೆ ಸಂದರ್ಭದಲ್ಲಿ ಮೇವು ಕಟಾವು ಮಾಡುವಂತಹ ಯಂತ್ರವನ್ನು ರೈತರಿಗೆ ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿ.ಪಂ ಸದಸ್ಯ ಸಿದ್ಧರಾಜ ಕಲಕೋಟಿ, ತಾ.ಪಂ.ಅಧ್ಯಕ್ಷೆ ಕಮಲವ್ವ ಪಾಟೀಲ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ, ಪಶು ಪಾಲನೆ ಮತ್ತು ಪಶುವೈದ್ಯ ಸೇವೆಗಳ (ಆಡಳಿತ) ಉಪನಿರ್ದೇಶಕ ರಾಜೀವ ಕೂಲೇರ, ಪಶು ಪಾಲನೆ ಮತ್ತು ಪಶುವೈದ್ಯ ಸೇವೆಗಳ (ಪಾಲಿಕ್ಲಿನಿಕ್) ಉಪನಿರ್ದೇಶಕ ಡಾ. ಗೋಪಿನಾಥ, ಪಶು ವೈದ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss