ಹೊಸದಿಲ್ಲಿ: ಪಾಲ್ಘರ್ ಸಾಧುಗಳ ಹತ್ಯೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಂತ್ರಸ್ತರ ಕುಟುಂಬ ಹೊಸದಾಗಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದ್ದು, ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ, ರಾಜ್ಯ ಪೊಲೀಸ್ ಇಲಾಖೆ, ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಈ ಕುರಿತು ಪ್ರತಿಕ್ರಿಯಿಸುವಂತೆ ಗುರುವಾರ ನೋಟಿಸ್ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಂ. ಆರ್.ಶಾ ಮತ್ತು ವಿ.ರಾಮಸುಬ್ರಮಣಿಯಂ ಒಳಗೊಂಡ ನ್ಯಾಯಪೀಠ ಆದೇಶ ನೀಡಿದೆ.