Friday, August 19, 2022

Latest Posts

ಪಾಲ್ಘಾರ್ ಹತ್ಯೆ ಪ್ರಕರಣ| ಸರ್ಕಾರಕ್ಕೆ ನೋಟೀಸ್ ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದ ಹತ್ಯೆ ಪ್ರಕರಣದ ವಿಚಾರವಾಗಿ ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಸಿಬಿಐ ಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಂ.ಆರ್.ಶಾ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ಈ ಆದೇಶವನ್ನು ಅಂಗೀಕರಿಸಿದ್ದು, ಈ ವಿಷಯವನ್ನು ಎರಡು ವಾರಗಳ ನಂತರ ವಿಚಾರಣೆಗೆ ಮಾಡಲಾಗಿದೆ.

ಕಳೆದ ಎರಡು ತಿಂಗಳಿನಿಂದ ಬಾಂಬೆ ಹೈಕೋರ್ಟ್‌ನಲ್ಲಿ ಸಿಬಿಐ ತನಿಖೆ ಕೋರಿತ್ತು. ಆದರೆ ಅರ್ಜಿದಾರರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಆಲಿಸಲು ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದ್ದು, ಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಿದೆ.

ಏಪ್ರಿಲ್ ನಲ್ಲಿ ನಡೆದ ಮಹಾರಾಜ್ ಕಲ್ಪವೃಕ್ಷ ಗಿರಿ (70), ಸುಶೀಲ್ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನೀಲೇಶ್ ತೆಲ್ಗಡೆ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!