Sunday, July 3, 2022

Latest Posts

ಪಿಎಂಸಿ ಬ್ಯಾಂಕ್ ಹಗರಣ: ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್ ಜಾರಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟೀವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಸಂಜಯ್ ರಾವತ್ ಪತ್ನಿ ಜನವರಿ 11 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವರ್ಷಾ ರಾವತ್‌ಗೆ ಮುಂಬೈ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ರೂ. 4,335 ಕೋಟಿಯಷ್ಟು ಹಣವನ್ನು ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಇ.ಡಿ. ಪ್ರಕರಣ ಕೈಗೆತ್ತಿಕೊಂಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss