Friday, July 1, 2022

Latest Posts

ಪಿಯುಸಿ ಫಲಿತಾಂಶ ಜುಲೈ ಎರಡನೇ ವಾರದಲ್ಲಿ ಪ್ರಕಟವಾಗಲಿದೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಮೈಸೂರು: ಪಿಯುಸಿ ಫಲಿತಾಂಶ ಜುಲೈ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಮೌಲ್ಯಮಾಪನ ಈಗಾಗಲೇ ಆರಂಭವಾಗಿದೆ. ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದೆ. ಅದಕ್ಕೂ ವೇಳಾಪಟ್ಟಿ ನಿಗದಿಯಾಗಿದೆ. ಜುಲೈ 8 ಅಥವಾ ಒಂದೆರಡು ದಿನಗಳ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಹೇಳಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಜುಲೈ ಅಂತ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದರು.
ಮಾರ್ಚ್ ೨೭ಕ್ಕೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಚರ್ಚೆ, ಸಮಾಲೋಚನೆ, ಫೋನ್‌ಇನ್ ಆಗಿದೆ. ಜೂನ್ ೨೫ರಿಂದ ಜುಲೈ ೪ರವರೆಗೆ ವೇಳಾಪಟ್ಟಿ ನಿಗದಿಯಾಗಿದೆ. ೮,೪೮,೫೦೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಹೊಸ ವಾತಾವರಣದಲ್ಲಿ ಪರೀಕ್ಷೆ ನಡೆಸಬೇಕಿದೆ. ಮಾಸ್ಕ್ಗಳನ್ನು ಕೊಡಲು ಸ್ಕೌಟ್ಸ್ ಮತ್ತು ಗೈಡ್ಸ್ ಮುಂದೆ ಬಂದಿದೆ. ಮೈಸೂರು ಜಿಲ್ಲೆಗೆ ೪೨ ಸಾವಿರ ಮಾಸ್ಕ್ ಕೊಟ್ಟಿದ್ದಾರೆ. ಪ್ರತಿ ಮಕ್ಕಳಿಗೆ ೨ ಮಾಸ್ಕ್ ಸಿಗುತ್ತೆ. ಸ್ಯಾನಟೈಸರ್ ನೀಡುತ್ತೇವೆ. ೪೦೦೦ ಸೆಂಟರ್‌ಗಳಲ್ಲೂ ಸ್ಯಾನಟೈಸರ್ ಇರುತ್ತೆ. ಥರ್ಮಲ್ ಸ್ಕಾ÷್ಯನರ್ ಮಾಡಲು ಆರೋಗ್ಯ ಇಲಾಖೆ ತಂಡಗಳನ್ನು ನಿಯೋಜಿಸಲಾಗುವುದು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರನ್ನು ನಿಯೋಜಿಸುತ್ತೇವೆ ಎಂದು ಮಾಹಿತಿ ನೀಡಿದರು.
ಪ್ರತಿ ಹಾಲ್‌ನಲ್ಲಿ ೨೪ ಜನ ಕೂರಿಸುತ್ತಿದ್ದೆವು. ಈ ವರ್ಷ ೧೮ ವಿದ್ಯಾರ್ಥಿಗಳನ್ನು ಕೂರಿಸುತ್ತೇವೆ. ಬೆಂಚ್‌ಗಳ ನಡುವೆ ಅಂತರ ಇರುತ್ತೆ. ವಿದ್ಯಾರ್ಥಿಯ ಆರೋಗ್ಯದಲ್ಲಿ ಏರುಪೇರುಗಳಿದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತೇವೆ. ಪರೀಕ್ಷಾರ್ಥಿಯು ಪರೀಕ್ಷೆಯಲ್ಲಿ ಮಿಸ್ ಆದರೆ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಫ್ರೆಶ್ ಕ್ಯಾಂಡಿಡೇಟ್ ಅಂತ ಪರಿಗಣಿಸುತ್ತೇವೆ. ವಲಸೆ ಕಾರ್ಮಿಕರ ಮಕ್ಕಳಿಗೆ ಸಮೀಪದ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ ಎಂದರು.
ಇದು ವಿಭಿನ್ನ ವರ್ಷವಾಗಿದೆ, ೨೦೨೦ ಕೊರೊನಾ ವರ್ಷವಾಗಿದೆ. ಪರಿಣಾಮ ಎಲ್ಲಾ ವರ್ಗಗಳು ಜರ್ಝರಿತವಾಗಿವೆ. ಹಾಗಾಗಿ ಯಾವುದೇ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಳ ಮಾಡಬಾರದು. ಮಾನವೀಯ ದೃಷ್ಟಿಯಿಂದ ನೋಡಬೇಕು. ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss