ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಕಳೆದ ಮಾರ್ಚ್ನಲ್ಲಿ ನಡೆಸಲಾಗಿದ್ದ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ ಫಲಿತಾಂಶ ನೋಡಬಹುದಾಗಿದೆ.