Monday, August 15, 2022

Latest Posts

ಪೀರನವಾಡಿಯಲ್ಲಿ ಮರಾಠಿಗರು ಕನ್ನಡಿಗರ ಮೇಲೆ ಪುಂಡಾಟ ಖಂಡಿಸಿ ಪ್ರತಿಭಟನೆ

ಮೈಸೂರು: ಬೆಳಗಾವಿಯ ಪೀರನವಾಡಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟವನ್ನು ಖಂಡಿಸಿ ಹಾಗೂ ತೆರವಾಗಿರುವ ಸ್ಥಳದಲ್ಲಿಯೇ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಮರಾಠಿಗರ ಪುಂಡಾಟದ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಿಗರ ಮೇಲೆ ನಿರಂತರವಾಗಿ ಎಂ.ಇ.ಎಸ್ ಪುಂಡರ ಪುಂಡಾಟಿಕೆ ಹೆಚ್ಚಾಗುತ್ತಿದ್ದು, ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸಂದರ್ಭದಲ್ಲಿ ಕೂಡ ಆಡಚಣೆ ಉಂಟು ಮಾಡಿದ್ದು, ಈಗಿನ ರಾಯಣ್ಣನ ಅಭಿಮಾನಿಗಳ ಮೇಲೆ ಮರಾಠಿಗರು ಚಪ್ಪಲಿ ಎಸೆದು ಹಲ್ಲೆ ಮಾಡುವುದಕ್ಕೆ ಮುಂದಾಗಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಕನ್ನಡಿಗರ ಮೇಲೆ ದೌರ್ಜನ್ಯ ನಿಲ್ಲದಿದ್ದಲ್ಲಿ ಎಲ್ಲಾ ಕನ್ನಡ ಪರ ಪ್ರಗತಿ ಪರ ಸಂಘಟನೆಗಳು ಸಭೆ ಸೇರಿ ಈ ಹೋರಾಟವನ್ನು ರಾಜ್ಯದಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಬ್ರೀಟಿಷರ ವಿರುದ್ಧ ಹೋರಾಟ ನಡೆಸಿದ್ದ ಅಪ್ರತಿಮ ಸೇನಾನಿ ಸಂಗೋಳ್ಳಿ ರಾಯಣ್ಣನ ಪ್ರತಿಮೆಯನ್ನು ತೆರವುಗೊಳಿಸಿರುವುದು ಖಂಡನೀಯ, ಕೂಡಲೇ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಪುನರ್ ಸ್ಥಾಪಿಸಬೇಕು, ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಈ ಸಂದರ್ಭ ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಚಂದ್ರಶೇಖರ್, ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಅರವಿಂದ್ ಶರ್ಮ, ಧನಪಾಲ್ ಕುರುಬರಹಳ್ಳಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಧ್ಯಕ್ಷ ಕೆ.ಎಸ್ ಶಿವರಾಮು,ಕರುಣಾಕರನ್, ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ದ್ಯಾವಪ್ಪ ನಾಯಕ , ಡಾ.ರಾಜ್ ಕನ್ನಡ ಕನ್ನಡ ಸೇನೆ ಅಧ್ಯಕ್ಷ ಮಹಾದೇವ ಸ್ವಾಮಿ ಇತರರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss