Tuesday, June 28, 2022

Latest Posts

ಪುತ್ತೂರು| 3 ಕೊರೋನಾ ಪಾಸಿಟಿವ್ ದೃಢ 

ಪುತ್ತೂರು: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಮಂಗಳವಾರ ೩ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಮಹಾರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ ೩೯ ವರ್ಷದ ಯುವಕನಲ್ಲಿ ಕೊರೋನಾ ದೃಢಪಟ್ಟಿದೆ. ಈತನ ಸಹದ್ಯೋಗಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕ ಮಂಗಳೂರಿನ ಕೋವಿಡ್ ವೆನ್‌ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲು ದ್ರವ ಪರೀಕ್ಷೆ ಪಾಸಿಟಿವ್ ಬಂದಿದೆ. ಸಹದ್ಯೋಗಿಯ ಪ್ರಾಥಮಿಕ ಸಂಪರ್ಕದಿಂದ ಇವರಿಗೆ ಕೊರೋನಾ ತಟ್ಟಿದೆ.
ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ೭೦ ವರ್ಷ ವಯಸ್ಸಿನ ಕೃಷ್ಣಪ್ಪ ಜ್ವರದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು ಮಂಗಳವಾರ ಇವರಲ್ಲಿ ಕೊರೋನಾ ದೃಢಪಟ್ಟಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಮೊಟೆತ್ತಡ್ಕ ನಿವಾಸಿ ೬೨ ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇವರು ಈಗಾಗಲೇ ಜ್ವರದ ಕಾರಣದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಒಟ್ಟು ೫೬ ಪ್ರಕರಣಗಳು ವರದಿಯಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss