ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಎಐಎನ್ಆರ್ಸಿ ಸ್ಥಾಪಕ ಅಧ್ಯಕ್ಷ ಎನ್ ರಂಗಸ್ವಾಮಿ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭನದಲ್ಲಿ ನಡೆದ ಸಮಾರಂಭದಲ್ಲಿ ಎನ್ಡಿಎ ಗೆಲುವಿಗೆ ಕಾರಣರಾದ 71 ವರ್ಷದ ಅನುಭವಿ ನಾಯಕ ರಂಗಸ್ವಾಮಿ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸಾಯಿ ಸೌಂದರ್ಯರಾಜನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕೋವಿಡ್ ನಿರ್ಬಂಧದಿಂದಾಗಿ, ಚುನಾಯಿತ ಶಾಸಕರು, ಪಕ್ಷದ ಹಿರಿಯ ನಾಯಕರು, ಸರ್ಕಾರ ಮುಖ್ಯ ಕಾರ್ಯದರ್ಶಿ ಅಶ್ವನಿ ಕುಮಾರ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ಮುಂದಿನ ವಾರ ಎರಡು ಪಕ್ಷಗಳು ಪರಸ್ಪರ ನಿರ್ಧಾರ ಕೈಗೊಂಡ ನಂತರ ಎಐಎನ್ಆರ್ಸಿ ಮತ್ತು ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.