Friday, August 12, 2022

Latest Posts

ಪುರಿ ಜಗನಾಥ, ಮೈಸೂರು ದಸರಾ ಮಾದರಿಯಲ್ಲೇ ಕೊಪ್ಪಳ ಗವಿಸಿದ್ಧೇಶ್ವರ ಜಾತ್ರೆ

ಹೊಸ ದಿಗಂತ ವರದಿ, ಕೊಪ್ಪಳ:

ದಕ್ಷಿಣ ಭಾರತದ ಮಹಾ ಕುಂಭ ಮೇಳ ಎಂದು ಖ್ಯಾತಿ ಪಡೆದು ಲಕ್ಷಾಂತರ  ಭಕ್ತರ ಮಧ್ಯೆ ಜರುವ ಕೊಪ್ಪಳ ಗವಿಸಿದ್ಧೇಶ್ವರ ಜಾತ್ರೆಯನ್ನು ಈಬಾರಿ  ಕೊರೋನಾ  ಮಹಾ ಮಾರಿ ನಿಮಿತ್ಯವಾಗಿ ಪುರಿ ಜಗನ್ನಾಥ ಹಾಗೂ ಮೈಸೂರು ದಸಾರಾ  ಮಾದರಿಯಲ್ಲಿ ಸರಳವಾಗಿ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಗವಿಮಠದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಈ ಭಾರತಿ ಜಾತ್ರೆ  ನಡೆಯುತ್ತಿದಿಯೋ ಇಲ್ಲವೋ ಎಂಬುದು ಗೊಂದಲಕ್ಕೆ ಕಾರಣವಾಗಿದ್ದ ಜಾತ್ರೆಯ ಕುರಿತು ಗುರುವಾರ ಪ್ರಕಟಣೆಯ ಮೂಲಕ ಸ್ಪಷ್ಟವಾಗಿ ತಿಳಿಸಿದ್ದಾರೆ.
ಶತಮಾನಗಳಿಂದ ನಡೆದುಕೊಂಡು ಬಂದ ಶ್ರೀ ಗವಿಸಿದ್ಧೇಶ್ವರ ಜಾತ್ರೆಯನ್ನು ಕೋವಿಡ್-19 ಇರುವುದರಿಂದ ಸರ್ಕಾರದ ಆದೇಶ ಮೀರದಂತೆ, ಸಂಪ್ರದಾಯ ಮುರಿಯದಂತೆ ಸರಳವಾಗಿ ಆಚರಿಸಲು ನಿಶ್ಚಯಿಸಿ ಶ್ರೀಮಠದ ಧಾರ್ಮಿಕ ವಿಧಿ ವಿಧಾನಗಳ ಆಚರಿಸಿ, ಉಳಿದ ಕಾರ್ಯಕ್ರಮಗಳನ್ನು ಮಾಡದಿರಲು ನಿಶ್ಚಯಿಸಲಾಗಿದೆ. ಆದರೆ ಶ್ರೀ ಗವಿಸಿದ್ಧೇಶ್ವರ ಮಹಾ ರಥೋತ್ಸವದ ದೃಶ್ಯವನ್ನು ಸಾಮಾಜಿಕ, ಜಾಲತಾಣದಲ್ಲಿ ಹಾಗೂ ಸ್ಥಳೀಯ ಚಾನಲ್‍ಗಳಲ್ಲಿ ಪ್ರಸಾರ ಮಾಡಲಾಗುವದು. ಭಕ್ತರು ಶ್ರೀಮಠದ ಆವರಣಕ್ಕೆ ಬರದೆ ತಾವಿರುವ ಸ್ಥಳದಲ್ಲಿಯೇ ರಥ ದರ್ಶನ ಮಾಡಿಕೊಳ್ಳಬೇಕೆಂದು ಮನವಿಸಿದ್ದಾರೆ.
ಅದರಂತೆ ಕೈಲಾಸ ಮಂಟಪದ ವೇದಿಕೆಯಲ್ಲಿ ಜರುಗುವ ಧಾರ್ಮಿಕ ಗೋಷ್ಠಿ, ಭಕ್ತ ಹಿತ ಚಿಂತನಾ ಸಭೆ, ಅನುಭಾವಿಗಳ ಅಮೃತಗೋಷ್ಠಿ, ಸಂಗೀತ, ಸಾಹಿತ್ಯ, ಹಾಸ್ಯ, ಸಾಧಕರ ಸನ್ಮಾನ ಈ ಯಾವ ಕಾರ್ಯಕ್ರಮಗನ್ನು ರದ್ದು ಗೊಳಿಸಲಾಗಿದೆ.  ಜ.31ರಂದು  ಶರಣರ ದೀರ್ಘದಂಡ ನಮಸ್ಕಾರ ಇರುತ್ತದೆ. ಆದರೆ ಭಕ್ತರಿಗೆ ದೀರ್ಘದಂಡ ನಮಸ್ಕಾರ ಹಾಕಲು ಅನುಮತಿ ಇರುವುದಿಲ್ಲ ಎಂದಿದ್ದಾರೆ.
ಮೂರು ದಿನ ಪ್ರಸಾದ ವ್ಯವಸ್ಥೆ
ಪ್ರತಿ ವರ್ಷ ನಡೆಯುವ ಮದ್ದು ಸುಡುವ ಕಾರ್ಯಕ್ರಮ ರದ್ದು ಮಾಡಲಾಗಿದೆ. ಪ್ರತಿ ವರ್ಷದಂತೆ 15-20 ದಿವಸ ನಡೆಯುವ ಮಹಾದಾಸೋಹ ಶ್ರೀಮಠಕ್ಕೆ ಬರುವ ಭಕ್ತಾಧಿಗಳಿಗೆ ಅನಾನುಕೂಲವಾಗದಿರಲೆಂದು ಈ ವರ್ಷ ಕೇವಲ ಜನೇವರಿ 30,31 ಮತ್ತು ಫೆಬ್ರುವರಿ 1ರವರೆಗೆ ಸೀಮಿತಗೊಳಿಸಲಾಗಿದೆ. ಭಕ್ತರು ಯಾರು ರೊಟ್ಟಿಗಳನ್ನು ಹಾಗೂ ಸಿಹಿ ಪದಾರ್ಥಗಳನ್ನು ತರಬಾರದು, ಅವುಗಳನ್ನು ಮಹಾದಾಸೋಹದಲ್ಲಿ ಸ್ವೀಕರಿಸುವದಿಲ್ಲ ಎಂದು ತಿಳಿಸಿದ್ದಾರೆ.
 ಜಾತ್ರೆಯಲ್ಲಿ ಏನೇನು ಇರುತ್ತದೆ
 ಜಾತ್ರೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ತಿರ್ಮಾನಿಸಲಾಗಿದೆ. ಅದರಂತೆ ಬಸವ ಪಟ, ಉಡಿ ತುಂಬುವುದು, ಹಲಗೇರಿಯಿಂದ ಕಳಸ ಪಲ್ಲಕ್ಕಿ ತರುವುದು, ಲಘು ರಥೋತ್ಸವ  ಶ್ರೀಗವಿಸಿದ್ಧೇಶ್ವರ ಮಹಾರಥೋತ್ಸವ, ಸಿದ್ಧೇಶ್ವರ ಮರೆವಣಿಗೆ, ಬಳಗಾನೂರಶರಣರ ದೀರ್ಘದಂಡ ನಮಸ್ಕಾರ ಹಾಕುವುದು ಇರುತ್ತದೆ.
ಆಯುರ್ವೇದಿಕ್ ಆಸ್ಪತ್ರೆಯಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಜರುಗುವ ರಕ್ತದಾನ ಶಿಬಿರವನ್ನು ನಡೆಸಲಾಗುತ್ತದೆ. ಗವಿಸಿದ್ಧೇಶ್ವರ ಗದ್ದುಗೆ ದರ್ಶನಕ್ಕೆ ಅವಕಾಶವಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಭಕ್ತರು ದರ್ಶನ ಪಡೆಯಬಹುದು. ಆದರೆ ಎಲ್ಲಿ ಗುಂಪುಗೂಡಿ ಇರುವುದಿಲ.
ಜಾತ್ರೆಯಲ್ಲಿ ಏನೇನು ಇರುವುದಿಲ್ಲ
 ಜಾತ್ರೆಯಲ್ಲಿ ಪ್ರತಿ ವರ್ಷ ಜಾತ್ರೆಯ ಅಂಗವಾಗಿ ಸಾಮಾಜಿಕ ಕಳಕಳಿಯಡಿ ನಡೆಯುವ ವಿದ್ಯಾರ್ಥಿ ಜಾಥಾ ಇರುವದಿಲ್ಲ, ಗುಡ್ಡದಲ್ಲಿ ಹಾಗೂ ಕೆರೆಯ ದಡದಲ್ಲಿ ಬಹಳ ಜನ ಒಂದೆ ಕಡೆ ಸೇರುವುದರಿಂದ ತೆಪ್ಪೋತ್ಸವ ಕಾರ್ಯಕ್ರಮವೂ ರದ್ದು ಮಾಡಲಾಗಿದೆ. ಜ. 30 ಶನಿವಾರ ಜರುಗುವ ಮಹಾರಥೋತ್ಸವ ಪ್ರತಿ ವರ್ಷದಂತೆ ಲಕ್ಷಾಂತರ ಭಕ್ತ ಜನರ ಮಧ್ಯದಲ್ಲಿ ಜರುಗುವದಿಲ್ಲ. ಜಾತ್ರಾ ಮೈದಾನದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ, ಪುರಿ ಜಗನ್ನಾಥ ರಥೋತ್ಸವ, ಮೈಸೂರ ದಸರಾ ಜಂಬೂಸವಾರಿ ರೀತಿಯಲ್ಲಿ ಕೇವಲ ಸಾಂಪ್ರದಾಯಿಕವಾಗಿ ರಥೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದಿದ್ದಾರೆ.
ಜಾತ್ರಾ ಮಹೋತ್ಸವದಲ್ಲಿ ಅಂಗಡಿಗಳನ್ನು, ಅಮ್ಯುಜ್‍ಮೆಂಟ್ ಪಾರ್ಕ, ಮಿಠಾಯಿ, ಹೋಟಲ್, ಸ್ಟೇಷನರಿ ಅಂಗಡಿಗಳನ್ನಗೊಂಡಂತೆ ಸಂಪೂರ್ಣವಾಗಿ ಆವರಣದಲ್ಲಿ ಜಾತ್ರಾ ಅಂಗಡಿಗಳನ್ನು ಹಾಕುವುದು  ರದ್ದು ಮಾಡಲಾಗಿದೆ.  ಅದರಂತೆ ಪಾನಿಪುರಿ, ಗೋಬಿ, ಕಡ್ಲೆ, ಕಬ್ಬಿನಹಾಲು ಐಸ್‍ಕ್ರೀಮ್, ಇತರೆ ತಿನಿಸಿನ ಮಾರಾಟದ ಅಂಗಡಿಗಳನ್ನು ನಿಷೇಧಿಸಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss