ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚತ್ಪುರ ಗ್ರಾಮದಲ್ಲಿ ನಡೆದ ಭಾರತೀಯ ಸೇನೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯ ವ್ಯಕ್ತಿಯನ್ನು ಬಂಧಿಸಲಾಗಿದೆ.
ಹಂದ್ವಾರದ ಮದ್ರಸಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಉಗ್ರ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಆಧಾರದಲ್ಲಿ ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆನಡೆಸಿದ್ದರು. ಈ ವೇಳೆ ಓರ್ವ ಉಗ್ರನನ್ನು ಹಾಗೂ ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯನನ್ನು ಬಂಧಿಸಲಾಗಿದೆ ಎಂದು ಸೇನೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.