ಪುಲ್ವಾಮಾದಲ್ಲಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ, ಎಕೆ 47 ಬಂದೂಕು ಸ್ವಾಧೀನ

0
69

ಪುಲ್ವಾಮಾ: ಮಂಗಳವಾರ ನಸುಕಿನಲ್ಲಿ ಬಾಂಡ್‌ಜೊ ಪ್ರದೇಶದಲ್ಲಿ ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಕಪ್ರಾನ್ ಅರಣ್ಯ ಭಾಗದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ, ಭದ್ರತಾ ಪಡೆ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಘರ್ಷಣೆಯಲ್ಲಿ ಇಬ್ಬರು ಉಗ್ರರನ್ನು ಯಮಪುರಿಗಟ್ಟಲಾಗಿದೆ. ಮೃತ ಉಗ್ರರಿಂದ 2 ಎಕೆ 47 ಬಂದೂಕುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನಾ ವಕ್ತಾರರು ತಿಳಿಸಿದ್ದಾರೆ. ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಸದ್ಯ ಸ್ಥಳದಲ್ಲಿ ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here