Sunday, June 26, 2022

Latest Posts

ಪುಲ್ವಾಮಾ ದಾಳಿಯ ಸತ್ಯ ಬಿಚ್ಚಿಟ್ಟ ಸಚಿವನಿಗೆ ಸಮನ್ಸ್‌ ನೀಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್‌

ಲಾಹೋರ್: ಪಾಕಿಸ್ತಾನ ಅಸೆಂಬ್ಲಿಯಲ್ಲಿ ಪುಲ್ವಾಮಾ ದಾಳಿ ಸತ್ಯ ಬಿಚ್ಚಿಟ್ಟಿದ್ದ ಸಚಿವ ಫವಾದ್ ಚೌಧರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‌ಗೆ ಸಮನ್ಸ್‌ ನೀಡಿದ್ದಾರೆ.
‘ಪುಲ್ವಾಮಾ ದಾಳಿಯನ್ನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಯಶಸ್ವಿಯಾಗಿ ಮುಗಿಸಿದ್ದಾರೆ. ಹಿಂದೂಸ್ಥಾನ ನೆಲಕ್ಕೆ ನುಗ್ಗಿ ದಾಳಿ ಮಾಡುವ ಛಾತಿ ಇಮ್ರಾನ್ ಖಾನ್ ಆಡಳಿತದ ಯಶಸ್ಸು’ ಎಂದು ಪಾಕಿಸ್ತಾನ ನ್ಯಾಶನಲ್ ಅಸೆಂಬ್ಲಿಯಲ್ಲಿ ಸಚಿವ ಫವಾದ್ ಚೌಧರಿ ರಾಜಾರೋಶವಾಗಿ ಹೇಳಿದ್ದರು.
ಈ ಅಧಿಕೃತ ಹೇಳಿಕೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನದ ಕಳ್ಳಾಟ ಬಯಲಾಗಿದ್ದು, ಪ್ರಧಾನಿ ಇಮ್ರಾನ್ ಖಾನ್‌ಗೆ ತೀವ್ರ ಸಂಕಷ್ಟ ತಂದೊಡ್ಡಿತ್ತು.
ಇದೀಗ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದ ಫವಾಧ್ ಚೌದರಿ ವಿರುದ್ಧ ಪಾಕ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಫವಾಧ್ ಚೌಧರಿಗೆ ಪ್ರಧಾನಿ ಇಮ್ರಾನ್ ಖಾನ್ ಸಮನ್ಸ್ ನೀಡಿದ್ದಾರೆ. ಹೇಳಿಕೆ ಕುರಿತು ಸ್ಪಷ್ಟನೆ ನೀಡಲು ಸೂಚಿಸಿದ್ದಾರೆ.
ಇದಷ್ಟೇ ಅಲ್ಲದೇ ಇನ್ಮುಂದೆ ಪುಲ್ವಾಮಾ ದಾಳಿ, ಭಾರತ ಹಾಗೂ ಪಾಕಿಸ್ತಾನ ಗಡಿ ಸಮಸ್ಯೆಗಳ ಕುರಿತು ಯಾವುದೇ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss