Thursday, June 30, 2022

Latest Posts

ಪುಲ್ವಾಮ ದಾಳಿಯಲ್ಲಿ ಹುತಾತ್ಮರರಾದ ಭಾರತೀಯ ಯೋಧರಿಗೆ ಪಂಜಿನ ಮೆರವಣಿಗೆ ಮೂಲಕ ಶ್ರದ್ಧಾಂಜಲಿ

ಹೊಸ ದಿಗಂತ ವರದಿ, ಶಿವಮೊಗ್ಗ :

ಪುಲ್ವಾಮ ದಾಳಿಯಲ್ಲಿ ಹುತಾತ್ಮರ ರಾದ ಭಾರತೀಯ ಯೋಧರಿಗೆ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ, ಬಜರಂಗದಳ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸೈನ್ಸ್ ಮೈದಾನದಿಂದ ಶಿವಪ್ಪನಾಯಕ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿದ್ಯರ್ಥಿ ಮುಖಂಡರಾದ ಧನುಸ್, ಅರವಿಂದ್, ಶ್ರೀಪಾದ್,ದರ್ಶನ, ಸ್ವಾತಿ, ಸುಪ್ರಿತ, ನದಿ ಮೊದಲಾದವರು ಇದ್ದರು.
ಗಾಂಧಿ ಬಜಾರ್ ಬಸವೇಶ್ವರ ದೇವಸ್ಥಾನ ಬಳಿ ಬಜರಂಗ ದಳ ಕಾರ್ತಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.
ಸೈನಿಕ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಗಿರೀಶ್, ಎಂಎಲ್ಸಿ ಆರ್. ಪ್ರಸನ್ನ ಕುಮಾರ್, ರಂಗನಾಥ ಮೊದಲಾದವರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss