ಕೆವಾಡಿಯಾ: ಪುಲ್ವಾಮ ದಾಳಿಯ ಸಂದರ್ಭದಲ್ಲಿ ಭಾರತೀಯ ಯೋಧರ ಪ್ರಾಣಾರ್ಪಣೆಯು ಕೆಲವರಿಗೆ ದುಃಖ ತಂದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.
ಪುಲ್ವಾಮ ದಾಳಿಯ ಸಂದರ್ಭದಲ್ಲಿ ಭಾರತೀಯ ಯೋಧರ ತ್ಯಾಗದಿಂದ ಕೆಲವರು ಬೇಸರಗೊಂಡಿಲ್ಲ ಎಂಬುದನ್ನು ದೇಶ ಎಂದಿಗೂ ಮರೆಯುವುದಿಲ್ಲ. ದೇಶದ ರಕ್ಷಣೆ ಹಾಗೂ ದೇಶದ ಹಿತದೃಷ್ಟಿಯ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.
ರಾಷ್ಟ್ರೀಯ ಏಕತಾ ದಿವಸ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಡೀ ವಿಶ್ವವೇ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದ್ದೆ, ಭಯೀತ್ಪಾದನೆ ಹಾಗೂ ಹಿಂಸೆಯಿಂದ ಯಾರಿಗೂ ಲಾಭವಿಲ್ಲ. ಭಾರತ ಭಯೋತ್ಪಾದನೆಯ ವಿರುದ್ಧ ಸದಾ ಹೋರಾಟ ಮಾಡುತ್ತಿದೆ ಎಂದರು.