Wednesday, June 29, 2022

Latest Posts

ಪೆಟ್ರೋಲ್ ಪಂಪ್‌ನಲ್ಲಿ ಬೆಂಕಿ ಅವಘಡ: ಎಂಟು ಮಂದಿಗೆ ಗಂಭೀರ ಗಾಯ

ಭುವನೇಶ್ವರ: ರಾಜಭವನದ ಬಳಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಕಟಕ್‌ನ ಎಸ್‌ಎಸ್‌ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಿದ್ದಾರೆ.
ಮೂರು ಅಗ್ನಿಶಾಮಕ ದಳಗಳು ಕಾರ್ಯ ಪೂರೈಸಿದ್ದು, ಬೆಂಕಿ ಹತೋಟಿಯಲ್ಲಿದೆ. ಇನ್ನು ಬೆಂಕಿ ಪೆಟ್ರೋಲ್ ಮತ್ತು ಡಿಸೇಲ್ ಇರುವ ಟ್ಯಾಂಕ್‌ಗಳಿಗೆ ಹರಡದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆ ಎಂದು ಪೊಲಿಸರು ತಿಳಿಸಿದ್ದಾರೆ. ಬೆಂಕಿ ಅವಗಢಕ್ಕೆ ಕಾರಣ ಏನೆಂದು ತಿಳಿದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss