Sunday, July 3, 2022

Latest Posts

ಪೇಜಾವರ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ‘ವೈ’ ಶ್ರೇಣಿ ಭದ್ರತೆ ಮಂಜೂರು

ಹೊಸ ದಿಗಂತ ವರದಿ ಉಡುಪಿ:

ಅಯೋಧ್ಯಾ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರಿಗೆ ಕರ್ನಾಟಕ ಸರಕಾರ ‘ವೈ’ ಶ್ರೇಣಿ ಭದ್ರತೆ ಮಂಜೂರು ಮಾಡಿದೆ. ಗುರುವಾರದಿಂದಲೇ ಸರಕಾರದ ಆದೇಶ ಜಾರಿಯಾಗಿದೆ.

ಕಳೆದ ಫೆಬ್ರವರಿಯಲ್ಲಿ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿ ನೇಮಕಗೊಂಡ ನಂತರ ಅವರಿಗೆ ವೈ ಶ್ರೇಣಿ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೀಗ ಕಳೆದೊಂದು ತಿಂಗಳಿಂದ ಪೇಜಾವರ ಶ್ರೀಗಳು ಶ್ರೀರಾಮಮಂದಿರ ನಿರ್ಮಾಣ ಹಾಗೂ ನಿಧಿ ಸಮರ್ಪಣಾ ಜನಜಾಗೃತಿ ಅಭಿಯಾನದ ಪ್ರಯುಕ್ತ ದಕ್ಷಿಣ ಭಾರತ ಪ್ರವಾಸದಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಇತ್ತೀಚೆಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಶಾಸಕರ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪೇಜಾವರ ಶ್ರೀಗಳಿಗೆ ವೈ ಶ್ರೇಣಿ ಭದ್ರತೆ ಒದಗಿಸುವ ಕುರಿತು ಆದೇಶಿಸಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ, ಗೃಹ ಸಚಿವರು, ಶಾಸಕರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss