Monday, August 15, 2022

Latest Posts

ಪೊಲೀಸರು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಐವರು ನಕ್ಸಲರ ಹತ್ಯೆ

ಗಡಚಿರೋಲಿ(ಮಹಾರಾಷ್ಟ್ರ): ಗಡ್‌ಚಿರೋಲಿ ಜಿಲ್ಲೆಯ ಗ್ಯಾರಪಟ್ಟಿ ಪ್ರದೇಶದಲ್ಲಿ ಪೊಲೀಸರ ಹಾಗು ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಗಡ್‌ಚಿರೋಲಿಯ ಸಿ-60 ಪೊಲೀಸರ ತಂಡ, ನಕ್ಸಲರಿರುವ ಪ್ರದೇಶವಾದ ಕೊಸಾಮಿ-ಕಿಸ್ನೇಲಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಸಂಜೆ 5 ಗಂಟೆ ವೇಳೆ ವಿಶೇಷ ಕಾರ್ಯಾಚರಣೆ ನಡೆಸಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ಐವರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕಲ್ವಾನಿಯಾ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಭೌಸಾಹೇಬ್ ಧೋಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss