Wednesday, August 17, 2022

Latest Posts

ಪೊಲೀಸರ ವಶದಲ್ಲಿದ್ದ ಆರೋಪಿ ಸಾವು: ಮೃತನ ಪತ್ನಿಯಿಂದ ಲಾಕಪ್ ಡೆತ್ ಆರೋಪ

ಹೊಸ ದಿಗಂತ ವರದಿ, ಚಿತ್ರದುರ್ಗ:

ಪೊಲೀಸರ ವಶದಲ್ಲಿದ್ದ ಆರೋಪಿ ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಅಗಳೇರಿ ಬಡಾವಣೆಯ ನಿವಾಸಿ ಶಿವಾಜಿರಾವ್ (47) ಎಂದು ಗುರುತಿಸಲಾಗಿದೆ.
ಶಿವಾಜಿರಾವ್ ಅವರನ್ನು ಗಾಂಜಾ ಮಾರಾಟ ಆರೋಪದಲ್ಲಿ ಮಂಗಳವಾರ ಸಂಜೆ ಪೊಲೀಸರು ಕರೆತಂದಿದ್ದರು. ಈ ಸಂದರ್ಭದಲ್ಲಿ ಆತನಿಗೆ ಮೂರ್ಚೆ ರೋಗ ಬಂದು ಪ್ರಜ್ಞೆ ಕಳೆದುಕೊಂಡಿದ್ದಾರೆ. ಕೂಡಲೇ ಇವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಈತನ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮೃತನ ಪತ್ನಿ ದೂರು ನೀಡಿದ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.
ಆದರೆ ಮೃತ ಆರೋಪಿ ಶಿವಾಜಿರಾವ್ ಪತ್ನಿ ಗೀತಾಬಾಯಿ, ತನ್ನ ಪತಿಯ ಸಾವಿಗೆ ಪೊಲೀಸರೇ ಕಾರಣ. ಇಬ್ಬರು ಪೊಲೀಸರು ಮಂಗಳವಾರ ಸಂಜೆ ಮನೆಗೆ ಬಂದು ಶಿವಾಜಿ ರಾವ್ ಅವರನ್ನು ಕರೆದೊಯ್ದಿದ್ದರು. ಆದರೆ ರಾತ್ರಿ ವೇಳೆಗೆ ಸಾವಿನ ಮಾಹಿತಿ ನೀಡಿದ್ದಾರೆ. ಶಿವಾಜಿರಾವ್ ಅವರಿಗೆ ಯಾವುದೇ ಖಾಯಿಲೆ ಇರಲಿಲ್ಲ. ಶಿವಾಜಿರಾವ್ ಅವರ ಮೇಲೆ ಪೊಲೀಸರು ಹಲ್ಲೆ ಮಾಡಿ ಲಾಕಪ್ ಡೆತ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!