Tuesday, August 9, 2022

Latest Posts

ಪೊಲೀಸ್ ಠಾಣೆಗೆ ಆವರಣಕ್ಕೆ ನುಗ್ಗಿ ಬೆಂಕಿ ಹಚ್ಚಿದವರು ದೇಶದ್ರೋಹಿಗಳು: ಕೇಂದ್ರ ಸಚಿವ ಸುರೇಶ ಅಂಗಡಿ

ಬೆಳಗಾವಿ: ಪೊಲೀಸ್ ಠಾಣೆಗೆ ಆವರಣಕ್ಕೆ ನುಗ್ಗಿ ಬೆಂಕಿ ಹಚ್ಚಿದವರು ದೇಶದ್ರೋಹಿಗಳು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿಕೆ ತಿಳಿಸಿದರು. ಅವರು ಬುಧವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದ ಘಟನೆ ಅತ್ಯಂತ ಖಂಡನೀಯವಾಗಿದೆ.ಇಂದು ಇಡೀ ಜಗತ್ತು ಭಾರತದತ್ತ ಮುಖ ಮಾಡಿ ನೋಡುತ್ತಿದೆ,
ದೇಶದಲ್ಲಿ ಕೊರೋನಾ ಮಹಾಮಾರಿ ಇದ್ದು ಶಾಂತತೆ ಕಾಪಾಡಬೇಕು, ದೇಶದ ಆರ್ಥಿಕತೆ ಸುಧಾರಿಸಲು ಪ್ರಧಾನಿ ಕೆಲಸ ಮಾಡುವ ವೇಳೆ ಇಂತಹ ಕೃತ್ಯ ಕೆಲವು ದುಷ್ಟ ಶಕ್ತಿ ಹಾಗೂ ದೇಶದ್ರೋಹಿಗಳ ಷಡ್ಯಂತ್ರ ಇದಾಗಿದೆ ಎಂದು ಕಿಡಿ ಕಾರಿದರು.
ಸಿಎಂ ಬಿಎಸ್‌ವೈ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಾನೂನು ಕಾಪಾಡುವ ಕೆಲಸ ಮಾಡುತ್ತಿದ್ದಾರೆ.
ಬಿಜೆಪಿ ಆಡಳಿತ ಕೆಡಿಸಿ ಕೆಟ್ಟ ಹೆಸರು ತರಲು ಕೆಲವರಿಂದ ವ್ಯವಸ್ಥಿತ ಷಡ್ಯಂತ್ರ ನಡೆದಿದೆ.ಬೆಂಗಳೂರಿನಲ್ಲಿ ಗಲಭೆ ಮಾಡಿದವರು ದೇಶದ್ರೋಹಿಗಳು ಎಂದರು.
ಪೊಲೀಸ್ ಠಾಣೆ, ಆಸ್ಪತ್ರೆ ಮೇಲೆ ಬೆಂಕಿ ಹಚ್ಚಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ವಾರಿಯರ್ ರೀತಿ ಕೆಲಸ ಮಾಡುವ ಮಾಧ್ಯಮಗಳ ಮೇಲೆ ಹಲ್ಲೆ ಮಾಡಿದವರು ದೇಶದ್ರೋಹಿಗಳು, ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಖಂಡನೀಯ, ಕಾನೂನು ಕೈಯಲ್ಲಿ ತಗೆದುಕೊಂಡು ವ್ಯವಸ್ಥಿತವಾಗಿ ಷಡ್ಯಂತ್ರ ಮಾಡುತ್ತಿದ್ದಾರೆಂದು ಅನಿಸುತ್ತೆ ಎಂದು ಸಚಿವ ಸುರೇಶ ಅಂಗಡಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss