Saturday, June 25, 2022

Latest Posts

ಪೊಲೀಸ್ ಭದ್ರತೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಮೃತದೇಹದ ಅಂತ್ಯ ಸಂಸ್ಕಾರ

ಮಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳ ಕಸ್ಬಾ ದ ಮಹಿಳೆಯ ಮೃತದೇಹದ ಅಂತ್ಯ ಸಂಸ್ಕಾರ ಭಾನುವಾರ ರಾತ್ರಿ ಬೋಳೂರಿನ ಶವಾಗಾರದಲ್ಲಿ ನಡೆಯಿತು. ಆರಂಭದಲ್ಲಿ ಸ್ಥಳೀಯರು ಅಂತ್ಯ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದರು. ಬಳಿಕ ಪೊಲೀಸ್ ಭದ್ರತೆ ಯಲ್ಲಿ, ಸರಕಾರಿ ಅಧಿಕಾರಿಗಳ ನೇತೃತ್ವದಲ್ಕಿ ಅಂತ್ಯಸಂಸ್ಕಾರ ನಡೆಯಿತು. ಪತಿ ಮತ್ತು ಮಗನಿಗೆ ಆಸ್ಪತ್ರೆಯಲ್ಲಿ ಪಾರ್ಥೀವ ಶರೀರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಕೆಲವೇ ಕೆಲವುಮಂದಿ ಸಂಬಂಧಿಕರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss