Saturday, June 25, 2022

Latest Posts

ಪ್ಯಾಟೇ ಹುಡುಗೀರ್ ಹಳ್ಳಿ ಲೈಫು-4ರ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಬಲಿ

ಮಂಡ್ಯ: ಕನ್ನಡ ಪ್ರಸಿದ್ಧ ಟಿವಿ ಮಾಧ್ಯಮದ ಪ್ಯಾಟೇ ಹುಡುಗೀರ್ ಹಳ್ಳಿ ಲೈಫು ಖ್ಯಾತಿಯ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಂಗಳವಾರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ಸಮೀಪದ  NH75ರಲ್ಲಿ ಟ್ರಾಕ್ಟರ್ ಹಾಗೂ ಮೆಬೀನಾ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಮೆಬೀನಾ ಮತ್ತು ಅವರ ಇಬ್ಬರು ಸ್ನೇಹಿತರು ಪ್ರಯಾಣ ಮಾಡುತ್ತಿದ್ದರು. ಬೆಂಗಳೂರಿನಿಂದ ಸೋಮವಾರಪೇಟೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮೆಬೀನಾ ಅವರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss