Wednesday, June 29, 2022

Latest Posts

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ: ಭಾವಿನಾ’ರ ಅಸಾಧಾರಣ ಸಾಧನೆಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಪ್ಯಾರಾಲಿಂಪಿಕ್ಸ್ ನ ಟೇಬಲ್ ಟೆನಿಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಗುಜರಾತ್ ಮೂಲದ ಭಾವಿನಾಬೆನ್ ಪಟೇಲ್ ಅವರಿಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು ಸೇರಿದಂತೆ ದೇಶಾದ್ಯಂತ ಶುಭ ಹಾರೈಸಿದ್ದಾರೆ.

ಈ ಗೆಲುವಿಗೆ ಅಭಿನಂದನೆ ನಲ್ಲಿಸಿದ ರಾಷ್ಟ್ರಪತಿ ಕೋವಿಂದ್ ಅವರು, ಅಸಾಧಾರಣ ಸಮಯ ಪ್ರಜ್ಞೆ, ನಿರ್ಣಯ ಮತ್ತು ಕೌಶಲ್ಯಗಳು ಭಾರತಕ್ಕೆ ಕೀರ್ತಿ ತಂದಿದೆ. ಈ ಅಸಾಧಾರಣ ಸಾಧನೆಗೆ ನಿಮಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ ನಲ್ಲಿ ಟೇಬಲ್ ಟೆನಿಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾವಿನಾ ಇಂದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಜೀವನ ಪಯಣ ಸ್ಪೂರ್ತಿದಾಯಕವಾಗಿದ್ದು ಇನ್ನಷ್ಟು ಯುವಜನತೆ ಮುಂದಿನ ದಿನಗಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಹೊರಳುವಂತೆ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇಂದಿನ ಪಂದ್ಯದಲ್ಲಿ ನಾನು ಸ್ವಲ್ಪ ಆತಂಕದಲ್ಲಿದ್ದೆ. ನನ್ನ ಆಟವನ್ನು ನಾನು ಸರಿಯಾಗಿ ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ. ಮುಂದಿನ ಬಾರಿ ಖಂಡಿತವಾಗಿಯೂ ಮತ್ತಷ್ಟು ಚೆನ್ನಾಗಿ ಆಡುತ್ತೇನೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಟೇಬಲ್ ಟೆನಿಸ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತ ಇತಿಹಾಸ ಸೃಷ್ಟಿಸಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ಪ್ಯಾರಾ ಪ್ಯಾಡ್ಲರ್ ಭಾವಿನಾ ಪಟೇಲ್ ಸಂತಸ ಹಂಚಿಕೊಂಡಿದ್ದಾರೆ

ಭಾವಿನಾಬೆನ್ ಪಟೇಲ್ ಅವರ ತವರು ರಾಜ್ಯ ಗುಜರಾತ್ ನ ಮೆಹ್ಸನ್ ನಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ಕುಟುಂಬಸ್ಥರು, ಸ್ನೇಹಿತರು ಸೇರಿ ನೃತ್ಯ ಮಾಡಿ ಸಿಹಿ ಹಂಚಿ ಸಂತಸಪಟ್ಟಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss