ಮಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಚಾರದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ.