Thursday, July 7, 2022

Latest Posts

ಪ್ರಚಾರ ಸಂದರ್ಭ ಹಿರಿಯರು, ಮಕ್ಕಳನ್ನು ಸ್ಪರ್ಶಿಸುವಂತಿಲ್ಲ: ಕಾಸರಗೋಡು ಡೀಸಿ ಸೂಚನೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ಕಾಸರಗೋಡು ಸ್ಥಳಿಯಾಡಳಿತ ಚುನಾವಣಾ ಕಣ ರಂಗೇರುತ್ತಿರುವಂತೆಯೇ ಅಭ್ಯರ್ಥಿ
ಗಳಿಗೆ, ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವವರಿಗೆ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿದೆ.

ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವವರು ಯಾವುದೇ ಕಾರಣಕ್ಕೂ ಹಿರಿಯ ನಾಗರಿಕರನ್ನು, ಮಕ್ಕಳನ್ನು ಸ್ಪರ್ಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಸೂಚಿಸಿದೆ.

ಅಲ್ಲದೆ ಚುನಾವಣಾ ಪ್ರಚಾರಕ್ಕೆ ತೆರಳುವವರು ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ತೊಡುವುದು ಕೂಡಾ ಕಡ್ಡಾಯವಾಗಿದ್ದು, ಜೊತೆಗೆ ಕೋವಿಡ್ ಮಾರ್ಗಸೂಚಿ, ಚುನಾವಣಾ ಆಯೋಗದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss