Thursday, August 18, 2022

Latest Posts

ಪ್ರಜಾಪ್ರಭುತ್ವವನ್ನು ಆಳಿದವರು ಡಿ. ದೇವರಾಜ ಅರಸು ಮಾತ್ರ: ಎಚ್.ಎ. ವೆಂಕಟೇಶ್

ಮಂಡ್ಯ: ಕರ್ನಾಟಕವನ್ನು ಹಲವರು ಆಳಿರಬಹುದು, ಆದರೆ ಅಂಬೇಡ್ಕರ್ ಪರಿಕಲ್ಪನೆಯ ಪ್ರಜಾಪ್ರಭುತ್ವವನ್ನು ಆಳಿದವರು ಮಾತ್ರ ಡಿ. ದೇವರಾಜ ಅರಸು ಮಾತ್ರವೇ ಎಂದು ಮೈಸೂರು ಬಣ್ಣ ಮತ್ತು ಅರಗ ಕಾರ್ಖಾನ ಮಾಜಿ ಅಧ್ಯಕ್ಷ ಎಚ್.ಎ. ವೆಂಕಟೇಶ್ ಬಣ್ಣಿಸಿದರು.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ವೇದಿಕೆ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಜನ್ಮ ದಿನೋತ್ಸವದ ಅಂಗವಾಗಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ರಾಜಕೀಯ ನ್ಯಾಯ ಕುರಿತ ವಿಚಾರ ಚಿಂತನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ರಾಜ್ಯ ಹಲವು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೆ, ದೇವರಾಜ ಅರಸು ಅವರು ಕೊಟ್ಟ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ. ವೃದ್ಧರು, ಅಂಗವಿಕಲರು, ವಿಧವೆಯರಂತಹ ಅಸಹಾಯಕ ವರ್ಗಕ್ಕೆ ನೆರವಾಗುವ ಮೂಲಕ ಅರಸು ಅವರ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಜೀವಂತವಾಗಿವೆ ಎಂದು ವಿಶ್ಲೇಷಿಸಿದರು.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಹಿಂದುಳಿದವರಿಗೆ ಮತ್ತು ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನ ಸಭೆಯಲ್ಲಿ ಮೀಸಲಾತಿ ದೊರಕಬೇಕು. ಈ ವರ್ಗಗಳಿಗೆ ಆಗುತ್ತಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ರಾಷ್ಟ್ರೀಯ ಮಟ್ಟದ ಚಳವಳಿಯ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!