Wednesday, July 6, 2022

Latest Posts

ಪ್ರಜ್ಞಾವಂತ ಶಿಕ್ಷಕರು ತಮಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಲಿದ್ದಾರೆ: ಜೆಡಿಯು ಅಭ್ಯರ್ಥಿ ಚಂದ್ರಶೇಖರ ವಿ. ಸ್ಥಾವರಮಠ ವಿಶ್ವಾಸ

ರಾಮನಗರ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಮುಂದುವರಿದ, ಪ್ರಬಲ ಒಕ್ಕಲಿಗ ಸಮುದಾಯದವರೇ ಹೆಚ್ಚಾಗಿ ಸ್ಪರ್ಧಿಸಿದ್ದು, ಸಾಮಾಜಿಕ ನ್ಯಾಯ ಒದಗಿಸುವ ದಿಕ್ಕಿನಲ್ಲಿ ವೀರಶೈವ -ಲಿಂಗಾಯತ ಅಭ್ಯರ್ಥಿಯಾದ ತಮ್ಮನ್ನು ಸಮುದಾಯದ ಶಿಕ್ಷಕರು ಹಾಗೂ ಎಲ್ಲಾ ವರ್ಗದ ಮತದಾರ ಶಿಕ್ಷಕರು ಚುನಾಯಿಸುವ ಭರವಸೆ ಇದೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಂಯುಕ್ತ ಜನತಾದಳ ಉಮೇದುವಾರ ಚಂದ್ರಶೇಖರ ವಿ.ಸ್ಥಾವರಮಠ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೇಲ್ಮನೆಯಲ್ಲಿ ಶಿಕ್ಷಣ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಮಾತನಾಡಲು ಶಿಕ್ಷಕರೇ ಚುನಾಯಿತರಾಗಬೇಕು ಎಂಬುದು ಸಂಯುಕ್ತ ಜನತಾದಳದ ಧ್ಯೇಯವಾಗಿದ್ದು, ಗ್ರಾಮೀಣ ಭಾಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಕಳೆದೊಂದು ದಶಕದಿಂದ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ತಮ್ಮನ್ನು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಅವರು ಗುರುತಿಸಿ ಬೆಂಗಳೂರು ಕ್ಷೇತ್ರದಲ್ಲಿ ಕಣಕ್ಕಿಳಿಸಿದ್ದಾರೆ. ವೃತ್ತಿ ಬಾಂಧವರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ತಮ್ಮನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪಕ್ಷ ಸರಳ ಚುನಾವಣೆಗೆ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಶಿಕ್ಷಕರು ಹಾಗೂ ಶಿಕ್ಷಕ ಮುಖಂಡರನ್ನು ಭೇಟಿ ಮಾಡಿ, ಅವರ ಸಮಸ್ಯೆಗಳ ಬಗ್ಗೆ ಆಲಿಸಿದ್ದು, ಚುನಾಯಿತನಾದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಹೋರಾಟ ಮಾಡುವ ವಾಗ್ದಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss