Monday, August 15, 2022

Latest Posts

ಪ್ರತಿ ಕೊಳಗೇರಿಗಳಲ್ಲಿ ಮನೆ ಕಟ್ಟಿಸುವುದು ನಮ್ಮ ಕರ್ತವ್ಯ: ವಸತಿ ಸಚಿವ ವಿ. ಸೋಮಣ್ಣ

ಬೆಂಗಳೂರು: ಬಡವರು ಬಡವರಾಗಿಯೇ ಉಳಿಯಬಾರದು, ಈ ನಿಟ್ಟಿನಲ್ಲಿ ನಗರದ ಪ್ರತಿ ಕೊಳಗೇರಿಗಳಲ್ಲಿ ಮನೆ ಕಟ್ಟಿಸಿಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಅವರು ಶನಿವಾರ ಗೋವಿಂದ ರಾಜ್ ನಗರದ ಅಗ್ರಹಾರ ದಾಸರಹಳ್ಳಿ ವಾರ್ಡ್‌ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದರು.

ನಗರದ ಅಗ್ರಹಾರ ದಾಸರಹಳ್ಳಿ ವಾರ್ಡ್‌ನಲ್ಲಿ ಹಕ್ಕು ಪತ್ರ ಇಲ್ಲದ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಾಗುವುದು. ಇಲ್ಲಿ ೬ ಕೋಟಿ ವೆಚ್ಚದ ಕಾಮಗಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ೧೪೦ಕ್ಕೂ ಹೆಚ್ಚು ಮನೆಗಳನ್ನು ಶೀಘ್ರವಾಗಿ ನಿರ್ಮಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss