Tuesday, July 5, 2022

Latest Posts

ಪ್ರತಿ ದಿನ 1000 ಟನ್ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡುತ್ತಿರುವ ಜೆಎಸ್ಡಬ್ಲ್ಯೂ ಸ್ಟೀಲ್ ಸಂಸ್ಥೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸ ದಿಗಂತ ವರದಿ, ಬಳ್ಳಾರಿ:

ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕದ ಬೇಡಿಕೆ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಇಲ್ಲಿನ ಜೆಎಸ್ಡಬ್ಲ್ಯೂ ಸ್ಟೀಲ್ ಸಂಸ್ಥೆಯು ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಜೆಎಸ್ ಡಬ್ಲ್ಯೂ ಅಧ್ಯಕ್ಷ ರಾಜಶೇಖರ ಪಟ್ಟಣಶೆಟ್ಟಿ ಅವರು ತಿಳಿಸಿದ್ದಾರೆ. ಏ.30 ರಿಂದ ಜೆಎಸ್ಡಬ್ಲ್ಯೂ ಸ್ಟೀಲ್ ಸಂಸ್ಥೆಯು ಪ್ರತಿದಿನ 1000 ಟನ್ ವೈದ್ಯಕೀಯ ಆಮ್ಲಜನಕವನ್ನು ಪೂರೈಸುತ್ತಿದೆ.
ಸಂಸ್ಥೆಯು ಏಪ್ರಿಲ್ ಆರಂಭದಲ್ಲಿ ಪ್ರತಿದಿನ ಸರಾಸರಿ 200 ಟನ್ ವೈದ್ಯಕೀಯ ಆಮ್ಲಜನಕವನ್ನು ಉತ್ಪಾದನೆ ಮಾಡುತ್ತಿತ್ತು. ನಂತರ ಈ ಉತ್ಪಾದನೆ ಪ್ರತಿ ದಿನಕ್ಕೆ 680 ಟನ್ ಗೆ ಏರಿತು. ಸಂಸ್ಥೆಯು ಈಗಾ ಪ್ರತಿದಿನ 1000 ಟನ್ ವೈದ್ಯಕೀಯ ಆಮ್ಲಜನಕವನ್ನು ಉತ್ಪಾದನೆ ಮಾಡುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಂಸ್ಥೆಯು ಸುಮಾರು 20,000 ಟನ್ ನಷ್ಟು ವೈದ್ಯಕೀಯ ಆಮ್ಲಜನಕವನ್ನು ಪೂರೈಸಿದೆ.
ಕೋವಿಡ್-19 ರೋಗಿಗಳ ಚಿಕಿತ್ಸೆಗೆ ರಾಜ್ಯ ಸರ್ಕಾರ ಮತ್ತು ಆಸ್ಪತ್ರೆಗಳಿಗೆ ಅಗತ್ಯವಿರುವ ನಿಟ್ಟಿನಲ್ಲಿ ಜೆಎಸ್ಡಬ್ಲ್ಯೂ ಸ್ಟೀಲ್ ವೈದ್ಯಕೀಯ ಆಮ್ಲಜನಕವನ್ನು ಪೂರೈಸುತ್ತಿದೆ. ಸಂಸ್ಥೆಯು ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ ಮತ್ತು ತಮಿಳುನಾಡು ಪ್ಲಾಂಟ್ ಗಳಿಂದಲೂ ವೈದ್ಯಕೀಯ ಆಮ್ಲಜನಕವನ್ನು ಉತ್ಪಾದಿಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss