ಪ್ರತಿ ಮಂಗಳವಾರ ತೆರೆಯಲಿದೆ ಮೈಸೂರು ಮೃಗಾಲಯ! 

0
19

ಮೈಸೂರು: ಕೋವಿಡ್-19 ವೈರಾಣು ತಡೆಗಟ್ಟುವ ಹಿನ್ನೆಲೆಯಲ್ಲಿ  ಜುಲೈ 5 ರಿಂದ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್‍ಡೌನ್ ಮಾಡಲು ಆದೇಶ ಹೊರಡಿಸಿರುವುದರಿಂದ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನಕ್ಕೆ ಪ್ರತಿ ಭಾನುವಾರ ರಜೆ ಘೋಷಿಸಿ, ಮಂಗಳವಾರದಂದು ವೀಕ್ಷಣೆಗೆ ತೆರೆಯಲಾಗುವುದು ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ತಿಳಿಸಿದ್ದಾರೆ.
ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ಜೂನ್ 30 ರಂದು ವೀಕ್ಷಣೆಗೆ ತೆರೆಯಲಾಗುವುದು ಹಾಗೂ ಜುಲೈ 5 ಭಾನುವಾರದoದು ವೀಕ್ಷಣೆಗೆ ನಿರ್ಬಂಧಗೊಳಿಸಲಾಗುವುದು ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here