ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಗಿಡ ನೆಟ್ಟ ಬಿಜೆಪಿ ಕಾರ್ಯಕರ್ತರು

ರಾಮನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೭೦ನೇ ಹುಟ್ಟುಹಬ್ಬವನ್ನು ಸ್ವಚ್ಚತಾ ಕಾರ್ಯ, ಸಸಿಗಳನ್ನು ನೆಡುವ ಮೂಲಕ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕ ಮತ್ತು ವಿವಿಧ ಘಟಕ ಪದಾಧಿಕಾರಿಗಳು ಅರ್ಥಪೂರ್ಣವಾಗಿ ಆಚರಣೆ ಮಾಡಿದರು.
ನಗರದ ರಾಮದೇವರ ಬೆಟ್ಟದ ರಸ್ತೆಯ ಆಗಾ ಬಡಾವಣೆಯಲ್ಲಿ ವಿವಿಧ ಜಾತಿಯ ಹಣ್ಣಿನ ಸಸಿಗಳನ್ನು ನೆಟ್ಟು ನಂತರ ಸುದ್ದಿಗಾರರೊಂದಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು ಮಾತನಾಡಿ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ನಾಯಕ ಪ್ರಧಾನಿ ನರೇಂದ್ರ ಮೋದೀಜಿ ಅವರ ೭೦ನೇ ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಲಾಗುತ್ತಿದೆ. ಜಿಲ್ಲೆಯ ೭ ಮಂಡಲಗಳಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಶ್ರಮದಾನ ಮಾಡುವ ಮೂಲಕ ಸಸಿ ನೆಟ್ಟು, ಇತಿಹಾಸ ಪ್ರಸಿದ್ದ ವಿವಿಧ ದೇವಾಲಯಗಳ ಸ್ವಚ್ಚತೆ ಕಾರ್ಯದಲ್ಲಿ ತೊಡಗಿ ಅರ್ಥಪೂರ್ಣ ಆಚರಣೆ ಮಾಡಲಾಗುತ್ತಿದೆ ಎಂದರು.
ನಗರ ಮಹಿಳಾ ಘಟಕದ ವತಿಯಿಂದ ಕೆಂಪೇಗೌಡನದೊಡ್ಡಿ ಗ್ರಾಮದ ಚಾಮುಂಡೇಶ್ವರಿ ದೇವಾಲಯದಲ್ಲಿ ಗಣ ಹೋಮ ಮತ್ತು ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಮೋದಿಯವರು ಇನ್ನಷ್ಟು ಸಮರ್ಥವಾಗಿ ದೇಶವನ್ನು ಮುನ್ನಡೆಸಲು ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಹುಲವಾಡಿ ದೇವರಾಜು, ನಗರ ಘಟಕದ ಅಧ್ಯಕ್ಷ ಪಿ.ಶಿವಾನಂದ್, ಜಿಲ್ಲಾಮಾಧ್ಯಮ ಪ್ರಮುಖ ಚಂದ್ರಶೇಖರರೆಡ್ಡಿ, ನಗರ ಘಟಕದ ಕಾರ್ಯದರ್ಶಿ ದೇವರಾಜು, ನಗರ ಮಹಿಳಾ ಘಟಕದ ಅದ್ಯಕ್ಷೆ ಪುಷ್ಪಲತಾ, ಸಾಮಾಜಿಕ ಜಾಲತಾಣದ ಮುಖ್ಯಸ್ಥ ವಿನೋದ್ ಭಗತ್, ವಕೀಲ ಟಿ.ಕೆ.ಶಾಂತಪ್ಪ, ಪಕ್ಷದ ಮುಖಂಡರಾದ ಬಾಲರಾಜು, ಕೃಷ್ಣ, ಅವಿನಾಷ್, ಕೃಷ್ಣಮೂರ್ತಿ, ಶ್ರೀನಿವಾಸ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss