ಗೋಣಿಕೊಪ್ಪ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ವರ್ಷದ ಜನ್ಮದಿನೋತ್ಸವ ಪ್ರಯುಕ್ತ ವೀರಾಜಪೇಟೆ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯ ಸಿ ಕೆ ಬೋಪಣ್ಣ ಮೊದಲಿಗೆ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾದರು.
ರಕ್ತದಾನ ಶಿಬಿರದಲ್ಲಿ ತಾಲೂಕಿನಿಂದ ಆಗಮಿಸಿದ್ದ ಎಪ್ಪತ್ತಕ್ಕೂ ಹೆಚ್ಚು ಯುವ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಪ್ರಧಾನಮಂತ್ರಿ ಅವರಿಗೆ ಯಶಸ್ಸು ಕೋರಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ನೆಲ್ಲೀರ ಚಲನ್, ತಾ.ಪಂ.ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಗಿರೀಶ್ ಗಣಪತಿ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಕವನ್ ಕಾರ್ಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ಆರ್ಎಂಸಿ ಅಧ್ಯಕ್ಷ ಪ್ರವೀಣ್, ಪಕ್ಷದ ಜಿಲ್ಲಾ ಖಜಾಂಚಿ ಮಾಚಯ್ಯ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.