ಹೊಸದಿಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪ್ರಾಧಾನ ಮಂತ್ರಿ ನರೇಂದರ ಮೋದಿಯವರನ್ನು ಭೇಟಿಯಾಗಲಿದ್ದಾರೆ.
ಕಳೆದ ತಿಂಗಳಿನ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಇದೇ ಮೊದಲು ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನ್ನಲ್ಲಿ ಮೋದಿಯವರನ್ನು ಭೇಟಿಯಾಗಲಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ದೆಹಲಿಯ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಅಮಿತ್ ಶಾ ಅವರನ್ನು ಭೇಟಿಯಾಗಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾದ ಕುರಿತು ಕೇಜ್ರಿವಾಲ್ ಚರ್ಚೆ ನಡೆಸಿದ್ದರು.