Wednesday, August 17, 2022

Latest Posts

ಪ್ರಧಾನಿ ಮೋದಿಯವರ 70ನೇ ಜನ್ಮದಿನ: ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ೭೦ನೇ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಪ್ರಸ್ಥಾವಿಕವಾಗಿ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪವನಕುಮಾರ ಮಲ್ಲಾಡದ, ರಕ್ತದಾನ ಶ್ರೇಷ್ಠ ದಾನ, ರಕ್ತವನ್ನು ಕೃತಕವಾಗಿ ತಯಾರಿಸಲು ಆಗುವುದಿಲ್ಲ, ಆದ್ದರಿಂದ ಹೆಚ್ಚು ಹೆಚ್ಚು ಯುವಕರು ರಕ್ತದಾನ ಮಾಡುವುದಕ್ಕೆ ಮುಂದೆ ಬರಬೇಕೆಂದು ಕರೆ ನೀಡಿದರು.
ರಕ್ತದಾನ ಮಾಡುವುದರಿಂದ ಯುವ ಜನತೆ ಆರೋಗ್ಯ ಪೂರ್ಣವಾಗಿ ಇರುವುದಕ್ಕೆ ಸಹಕಾರಿಯಾಗಲಿದೆ. ರಕ್ತದಾನ ಮಾಡುವುದರಿಂದ ರಕ್ತದೊತ್ತಡ, ಸಕ್ಕರೆ ಖಾಯಿಲೆ ಮತ್ತು ಹೃದಯಾಘಾತದಂತಹ ಮಾರಕ ಖಾಯಿಲೆಗಳಿಂದ ದೂರವಿರುವುದಕ್ಕೆ ಸಹಕಾರಿಯಾಗುವುದಲ್ಲದೆ ಒಬ್ಬರು ರಕ್ತ ನೀಡುವುದರಿಂದ ಇನ್ನೊಬ್ಬರ ಜೀವವನ್ನು ಉಳಿಸುವುದಕ್ಕೆ ಸಹಕಾರಿಯಾಗಲಿದೆ ಎಂದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ, ದಣಿವರಿಯದ ನಾಯಕನ ಜನ್ಮದಿನವನ್ನು ಕೇವಲ ಬಾಷಣಗಳಿಂದ ಆಚರಿಸದೆ, ರಕ್ತದಾನ ಮಾಡುವ ಮೂಲಕ ಅರ್ಥ ಗರ್ಭಿತವಾಗಿ ಆಚರಿಸಬೇಕೆಂದು ಯುವ ಮೋರ್ಚಾದ ವತಿಯಿಂದ ರಾಜ್ಯಾದ್ಯಂತ ೭೦ ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಸಲಾಗಿದೆ ಎಂದರು.
ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ನರೇಂದ್ರ ಮೋದಿಯವರ ೭೦ನೇ ಜನ್ಮದಿನದಂದು ಯುವ ಮೋರ್ಚಾದ ವತಿಯಿಂದ ೭೦ ಯುವಕರಿಂದ ರಕ್ತದಾನ ಮಡಿಸಬೇಕು ಎಂದು ಜಿಲ್ಲಾ ಘಟಕದಿಂದ ಹೇಳಿದ ಜವಾಬ್ದಾರಿಯನ್ನು ಇಂದು ಯುವ ಮೋರ್ಚಾದವರು ನಿರ್ವಹಿಸುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದರು.
ಶಾಸಕ ನೆಹರು ಓಲೇಕಾರ ಮಾತನಾಡಿದರು, ಈ ಸಂದರ್ಭದಲ್ಲಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕಳಸೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಶಶಿದರ ಹೊಸಳ್ಳಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಪ್ರಕಾಶ ಶೃಂಗೇರಿ, ನಗರ ಘಟಕದ ಯುವ ಮೋರ್ಚಾ ಅಧ್ಯಕ್ಷರಾದ ಅಭಿಷೇಕ ಗುಡಗೂರ, ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷ ವಿರೇಶ ಹಿರೇಮಠ, ನಗರ ಘಟಕದ ಪ್ರಧಾನಕಾರ್ಯದರ್ಶಿ ಮಂಜುನಾಥ ಮಡಿವಾಳರ, ಜಿಲ್ಲಾ ಯುವ ಮೋರ್ಚಾ ಪ್ರಧಾನಕಾರ್ಯದರ್ಶಿ ದಯಾನಂದ ಜಾಧವ್, ವಿವೇಕಾನಂದ ಇಂಗಳಗಿ, ನಗರ ಘಟಕ ಪ್ರಧಾನಕಾರ್ಯದರ್ಶಿ ಪ್ರಶಾಂತ ಕೋಡಿತ್ಕರ್, ಕಿರಣ ಅಂಗಡಿ, ನಗರಸಭೆ ಸದಸ್ಯೆ ಚನ್ನಮ್ಮ ಬ್ಯಾಡಗಿ, ಜಗದೀಶ ಮಲಗೋಡ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಯುವ ಮೋರ್ಚಾ ನಗರ ಘಟಕದ ಪದಾಧಿಕಾರಿಗಳು, ಯುವ ಮೋರ್ಚಾ ಗ್ರಾಮೀಣ ಘಟಕದ ಪದಾಧಿಕಾರಿಗಳು, ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!