Thursday, August 11, 2022

Latest Posts

ಪ್ರಧಾನಿ ಮೋದಿ ಜನ್ಮದಿನ ಸಂಭ್ರಮ: ಕುಂಬಳೆಯಲ್ಲಿ ಹಿರಿಯ ವ್ಯಕ್ತಿಗೆ ಗೌರವ

ಕುಂಬಳೆ: ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 70 ನೇ ಜನ್ಮದಿನಾಚರಣೆಯ ಅಂಗವಾಗಿ ಶನಿವಾರ
ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪರಿಸರದ ಜನಸಂಘದ ಹಿರಿಯ ಕಾರ್ಯಕರ್ತ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರೂ ಆದ ಜನಾರ್ದನ ಕಾಮತ್ ಕುಂಬಳೆ ಅವರನ್ನು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಆಶ್ರಯದಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು.
ಅವರ ನಿವಾಸದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಉತ್ತರ ವಲಯ ಉಪಾಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ, ಮಂಜೇಶ್ವರ ಮಂಡಲ ಕಾರ್ಯದರ್ಶಿ ಕೆ.ರಮೇಶ್ ಭಟ್, ಪಂಚಾಯತ್ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಕಾಮತ್ ಹಾಗೂ
144 ನೇ ಬೂತ್ ಸಮಿತಿಯ ಅಧ್ಯಕ್ಷ ಕೆ.ಮಧುಸೂದನ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss