Sunday, August 14, 2022

Latest Posts

ಪ್ರಧಾನಿ ಮೋದಿ ಹುಟ್ಟುಹಬ್ಬ: ಗಿಡ ನೆಟ್ಟು ಆಚರಿಸಿದ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ೭೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ಸಸಿ ನೆಡಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಸಸಿ ನೆಟ್ಟು, ನೀರು ಹಾಕಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ, ಅವರು ಜಾರಿಗೆ ತಂದಿರುವ ಜನಪ್ರಿಯ ಯೋಜನೆಗಳು ಬಗ್ಗೆ ಮಾಹಿತಿ ನೀಡಿದರು. ಮುಡಾ ಆವರಣದಲ್ಲಿ ಹತ್ತು ಸಸಿಗಳನ್ನು ನೆಡಲಾಗಿದ್ದು, `ಲಕ್ಷ ವೃಕ್ಷ ಅಭಿಯಾನದಡಿ ನಾಳೆಯಿಂದ ಮುಡಾಗೆ ಸೇರಿದ ಉದ್ಯಾನಗಳಲ್ಲಿ ಸಸಿಗಳನ್ನು ನೆಡಲಾಗುವುದು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸವಿತಾ, ಸದಸ್ಯೆ ಲಕ್ಷಿ÷್ಮದೇವಿ, ಬಿಜೆಪಿ ಮುಖಂಡರು ಮಂಜು, ನಾಗೇಶ್, ಅಶೋಕಪುರಂ ಕುಮಾರ್, ಅಭಿ, ರಾಜೇಶ್, ಬಸವರಾಜ್ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss