ಕುಂಬಳೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 70ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಆಶ್ರಯದಲ್ಲಿ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಮೋದಿಜಿಯವರಿಗೆ ಉತ್ತಮ ಆರೋಗ್ಯ , ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನರ ಸೇವೆ ಮಾಡುವ ಭಾಗ್ಯ ಕರುಣಿಸಲಿ ಎಂದು ಗುರುವಾರ ಬೆಳಗ್ಗೆ ವಿಶೇಷ ಪೂಜೆ ಮತ್ತು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಪಂಚಾಯತ್ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಕಾಮತ್, ಕೇರಳ ರಾಜ್ಯ ಕೌನ್ಸಿಲ್ ಸದಸ್ಯ ಎಚ್.ಸತ್ಯಶಂಕರ ಭಟ್, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್, ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ ಕೆ.ವಿನೋದನ್ ಕಡಪ್ಪುರ, ಕುಂಬಳೆ ಗ್ರಾಮ ಪಂಚಾಯತ್ ಸದಸ್ಯ ಕೆ.ಸುಜಿತ್ ರೈ , ಓಬಿಸಿ ಮೋರ್ಚಾದ ಜಿಲ್ಲಾ ಸಮಿತಿ ಸದಸ್ಯ ಶಶಿ ಕುಂಬಳೆ, ನೇತಾರರಾದ ಜಗದೀಶ್ ಪೇರಾಲ್, ರಾಜೇಶ್ ಬಂಬ್ರಾಣ ಹಾಗೂ ಹಿರಿಯ ಕಾರ್ಯಕರ್ತರಾದ ಗೋಪಾಲ ಮುಂತಾದವರು ಭಾಗವಹಿಸಿದ್ದರು.