ಬಳ್ಳಾರಿ: ಪ್ರಧಾನ ಮಂತ್ರಿ ನರೇಂದ್ರ ಮೊದಿಜೀ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಆ.17 ರಂದು ನಗರದ ಗಾಂಧಿನಗರ ಬಡಾವಣೆಯ ಬಾಲ ಭಾರತಿ ಶಾಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಸೋಮಶೇಖರ ಗೌಡ ಅವರು ತಿಳಿಸಿದ್ದಾರೆ.
ದೇಶದ ಸೇವಕ, ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ದಾಮೋದರ್ ದಾಸ್ ಜೀ ಅವರ ಹುಟ್ಟು ಹಬ್ಬ ಹಿನ್ನೆಲೆ ಹಮ್ಮಿಕೊಂಡಿರುವ ರಕ್ತದಾನ ಶಿಬಿರದಲ್ಲಿ ಭಾಗವಹಿಸಲು ಇಶ್ಚಿಸುವವರು 9035511112, 9060382926 ಗೆ ಸಂಪರ್ಕಿಸಬಹುದು. ಜಿಲ್ಲೆಯ ನಮ್ಮ ಎಲ್ಲ ಕಾರ್ಯಕರ್ತರು, ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.