Sunday, August 14, 2022

Latest Posts

ಪ್ರವಾಹದಿಂದ‌ ಹಾನಿ: ಅಧಿಕಾರಿಗಳು, ಜ‌ನಪ್ರತಿನಿಧಿಗಳೊಂದಿಗೆ ಸಿಎಂ

ಬಾಗಲಕೋಟೆ : ವಿಜಯಪುರ ‌,ಗದಗ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹದಿಂದ‌ ಹಾಗೂ ಮಳೆಯಿಂದ ಹಾನಿಯಾದ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಧಿಕಾರಿಗಳು ಜ‌ನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಕೃಷ್ಣಾ ಭಾಗ್ಯ ಜಲ ನಿಗಮದ ಸಭಾಭವನದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಲಸಂಪನ್ಮೂಲ ರಮೇಶ ಜಾರಕಿಹೊಳಿ,ಕಂದಾಯ ಸಚಿವ ಆರ್.ಅಶೋಕ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಸಂಸದ ಶಿವುಕುಮಾರ ಉದಾಸಿ, ಶಾಸಕ ವೀರಣ್ಣ ಚರಂತಿಮಠ, ಮುರಗೇಶ ನಿರಾಣಿ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ, ಜಿ.ಪಂ ಅಧ್ಯಕ್ಷೆ ‌ಬಾಯಕ್ಕ ಮೇಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಾದ, ವಿಜಯಪುರ ಉಸ್ತುವಾರಿ ಕಾರ್ಯದರ್ಶಿ ರಾಕೇಶ ಸಿಂಗ್, ಬಾಗಲಕೋಟೆ ,ವಿಜಯಪುರ, ಗದಗ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss