Wednesday, August 17, 2022

Latest Posts

ಪ್ರವಾಹ: ಕೊಚ್ಚಿಹೋದ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ

ಧಾರವಾಡ: ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಲ್ಲಿ ಕೊಚ್ಚಿಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ ಅವರ ಕುಟುಂಬಗಳಿಗೆ ಬುಧವಾರ ಜಿಲ್ಲಾಡಳಿತ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಯಿತು.
ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಅವರಿಗೆ ತಲಾ ರೂ.5 ಲಕ್ಷ ಪರಿಹಾರ ಧನದ ಚೆಕ್ ನೀಡಿ ಧೈರ್ಯ ಹೇಳಿದರು.
ನಂತರ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಅಲ್ಲಿಂದ ನೇರವಾಗಿ ಬೆಣ್ಣೆಹಳ್ಳಕ್ಕೆ ತೆರಳಿ ಮೇಲ್ಸೇತುವೆ, ಹಳ್ಳದ ಸುತ್ತಲು ಬೆಳೆದ ಗಿಡಗಂಟೆ ವೀಕ್ಷಿಸಿದರು. ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ, ಅಣ್ಣಿಗೇರಿ ತಹಶಿಲ್ದಾರ ಕೊಟ್ರೇಶ, ನವಲಗುಂದ ತಹಶಿಲ್ದಾರ ನವೀನ ಹುಲ್ಲೂರ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!